ಸೋಮವಾರಪೇಟೆ, ಅ. ೨೦: ದೇಶದ ಎಲ್ಲಾ ರಂಗಗಳಿಗೂ ಸ್ವಾವಲಂಬನೆ ನೀಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮವಹಿಸಿದೆ. ಈ ನಿಟ್ಟಿನಲ್ಲಿ ಕೃಷಿ ಕ್ಷೇತ್ರದ ಆತ್ಮನಿರ್ಭರತೆಗಾಗಿ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದು ದೇಶದ ಎಲ್ಲಾ ರೈತರಿಗೆ ವರದಾನವಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿನ ಎಂ.ಜಿ. ರಸ್ತೆಯಲ್ಲಿ ನೂತನವಾಗಿ ತೆರೆಯಲಾಗಿರುವ ಕೇಂದ್ರ ಕೃಷಿ ಇಲಾಖೆ ಪ್ರಾಯೋಜಿತ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೇಶದ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದ್ದಾರೆ. ಇದೀಗ ಕೃಷಿಕರಿಗೆ ಒಂದೇ ಸೂರಿನಡಿ ಎಲ್ಲಾ ಮಾಹಿತಿ, ಸೌಲಭ್ಯಗಳು ದೊರಕ ಬೇಕೆನ್ನುವ ಮಹತ್ವಾಕಾಂಕ್ಷೆಯಿAದ ಕಿಸಾನ್ ಸಮೃದ್ಧಿ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ ಎಂದರು.

ದೇಶದ ೬೦೦ ಜಿಲ್ಲೆಗಳ ಪೈಕಿ ಕೊಡಗಿಗೂ ಸ್ಥಾನ ನೀಡಲಾಗಿದ್ದು, ಪ್ರಥಮವಾಗಿ ಸೋಮವಾರಪೇಟೆಯಲ್ಲಿ ಸಮೃದ್ಧಿ ಕೇಂದ್ರ ಸ್ಥಾಪನೆಯಾಗಿದೆ. ಮಣ್ಣು ಪರೀಕ್ಷೆ, ಬೀಜೋಪಚಾರ, ಬಿತ್ತನೆ ಬೀಜಗಳ ಗುಣಮಟ್ಟ ಪರೀಕ್ಷೆ, ರಸಗೊಬ್ಬರ, ಕ್ರಿಮಿನಾಶಕಗಳು ಸೇರಿದಂತೆ ಕೃಷಿಗೆ ಸಂಬAಧಿಸಿದ ಎಲ್ಲಾ ರೀತಿಯ ಮಾಹಿತಿ, ತರಬೇತಿಗಳನ್ನು ಈ ಕೇಂದ್ರದ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ ಎಂದು ರಂಜನ್ ಹೇಳಿದರು. ಈ ಹಿಂದೆ ರಾಜೀವ್‌ಗಾಂಧಿ ಅವರು ಕೇಂದ್ರದಿAದ ೧೦೦ ರೂಪಾಯಿ ಬಿಡುಗಡೆ ಮಾಡಿದರೆ ಫಲಾನುಭವಿಗೆ ಕೇವಲ ೨೦ ರೂಪಾಯಿ ತಲುಪುತ್ತದೆ ಎಂದು ಹೇಳಿದ್ದರು. ಆದರೆ ಪ್ರಸ್ತುತ ಕೇಂದ್ರ ಸರ್ಕಾರ ರೈತರ ಖಾತೆಗೆ ನೇರವಾಗಿ ಪರಿಹಾರ ಧನ ಬಿಡುಗಡೆ ಮಾಡುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೃಷಿ ಕ್ಷೇತ್ರದ ಪ್ರಗತಿಗೆ ಕ್ರಾಂತಿಕಾರಕ ಮುನ್ನುಡಿ ಬರೆದಿದೆ ಎಂದು ಶಾಸಕರು ಅಭಿಪ್ರಾಯಿಸಿದರು.

ಶೀಘ್ರದಲ್ಲೇ ‘ಒನ್ ನೇಷನ್ ಒನ್ ಫರ್ಟಿಲೈಸರ್’ ‘ಅಗ್ರಿ ಸ್ಟರ‍್ಟ್ ಅಪ್ ಕನ್‌ಕ್ಲೇವ್’ ಯೋಜನೆಯೂ ಅನುಷ್ಠಾನಕ್ಕೆ ಬರಲಿದೆ. ಇವುಗಳು ರೈತರಿಗೆ ವರದಾನವಾಗಲಿದ್ದು, ದೇಶದ ಕೃಷಿ ಕ್ಷೇತ್ರದ ಪ್ರಗತಿಗೆ ಪೂರಕವಾಗಲಿದೆ ಎಂದು ಅಭಿಪ್ರಾಯಿಸಿದರು.

ಈ ಸಂದರ್ಭ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ನರೇಂದ್ರ ಮೋದಿ ಅವರು ೧೨ನೇ ಕಂತು ಬಿಡುಗಡೆ ಮಾಡಿದ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಲಾಯಿತು.

೧೨ನೇ ಕಂತಿನಲ್ಲಿ ದೇಶದಲ್ಲಿ ೧೬ ಸಾವಿರ ಕೋಟಿ ಕೃಷಿ ಸಮ್ಮಾನ್ ಯೋಜನೆಯ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಕೊಡಗಿನ ೪೪,೭೦೨ ರೈತರಿಗೆ ೮.೯೪ ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇದು ಕೇಂದ್ರದ ಮೋದಿ ಸರ್ಕಾರ ಕೃಷಿ ವಲಯದ ಅಭಿವೃದ್ಧಿಗೆ ಕೈಗೊಂಡಿರುವ ಸುಧಾರಣಾ ಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ರಂಜನ್ ಹೇಳಿದರು. ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ. ಬಾಲರಾಜ್ ರಂಗರಾವ್, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಯಾದವ್ ಬಾಬು, ಕಾಫಿ ಮಂಡಳಿಯ ಲಕ್ಷಿö್ಮÃಕಾಂತ್, ಕಿಸಾನ್ ಸಮೃದ್ಧಿ ಕೇಂದ್ರದ ನಂದಕುಮಾರ್ ಸೇರಿದಂತೆ ಕೃಷಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.