ಗುಡ್ಡೆಹೊಸೂರು, ಅ. ೨೦: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ ರೂ. ೧೫ ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕೊಠಡಿಯನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಈ ಸಂದರ್ಭ ಶಾಲಾ ಆಡಳಿತ ಮಂಡಳಿಯವರು ಶಾಲಾ ಮೈದಾನಕ್ಕೆ ಬಾಕಿ ಉಳಿದಿರುವ ತಡೆಗೋಡೆಯನ್ನು ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. ಕಾಮಗಾರಿಯನ್ನು ಶೀಘ್ರದಲ್ಲಿ ನಡೆಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಶಾಸಕರು ಭರವಸೆ ನೀಡಿದರು. ಶಾಲಾ ಮುಖ್ಯಶಿಕ್ಷಕಿ ಆಯುಚ್ಚಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆ ಯಶೋಧ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ದಿನೇಶ್, ಡಿ.ವೈ.ಎಸ್.ಪಿ. ಗಂಗಾಧರಪ್ಪ, ಗ್ರಾ.ಪಂ. ಸದಸ್ಯರಾದ ಕುಡೆಕ್ಕಲ್ ನಿತ್ಯಾನಂದ, ಸುಶೀಲ, ಗುರುಪ್ರಸಾದ್, ಮಾದಪ್ಪ, ರಮೇಶ್, ಕುಡೆಕ್ಕಲ್ ಚಿದಾನಂದ, ಮಂಡೆಪAಡ ಮಾದಪ್ಪ, ಉಮಾ, ನಾರಾಯಣ, ರುಕ್ಮಿಣಿ ಮತ್ತು ಎಂ.ಆರ್. ಉತ್ತಪ್ಪ, ಮತ್ತು ಶಿಕ್ಷಕರು ಹಾಜರಿದ್ದರು.