ಮಡಿಕೇರಿ, ಅ. 21: ವೀರಾಜಪೇಟೆ ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ತಾ. 30 ರಂದು ವೀರಾಜಪೇಟೆಯ ಸೆರಿನಿಟಿ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೆ.ಎಂ.ಎ. ಸ್ಥಾಪಕಾಧ್ಯಕ್ಷ ಕುವೇಂಡ ವೈ. ಹಂಝತುಲ್ಲಾ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಂ.ಎ. ಅಧ್ಯಕ್ಷ ದುದ್ಧಿಯಂಡ ಹೆಚ್. ಸೂಫಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ.ಎಲ್.ಸಿ. ಸುಜಾ ಕುಶಾಲಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮಣ ಭಾಗವಹಿಸಲಿದ್ದಾರೆ.