ಮಡಿಕೇರಿ, ಅ. ೨೨: ಕರ್ನಾಟಕ ಮಾಧ್ಯಮ ಅಕಾಡೆಮಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಟ್ಯಾಬ್‌ಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹರಿಂದ ಅರ್ಜಿ ಆಹ್ವಾನಿಸ ಲಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಟ ೧೦ ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬAಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು.

ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸ ಬೇಕು, ತಾವು ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿAದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ. ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ. ಪತ್ರಿಕೆಯು ದಾಖಲೆಗಳನ್ನು ಒದಗಿಸಬೇಕು.

ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸ ಬೇಕು, ತಾವು ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿAದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ. ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ. ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು. ಅಭ್ಯರ್ಥಿಗಳು ಸ್ವಯಂ ಅರ್ಜಿಗ ಳೊಂದಿಗೆ ದಾಖಲೆಗಳನ್ನು ಇ-ಮೇಲ್ ವಿಳಾಸ ಏಚಿಡಿಟಿಚಿಣಚಿಞಚಿ meಜiಚಿಚಿಛಿಚಿಜemಥಿ @gmಚಿiಟ.ಛಿomಗೆ ಸಲ್ಲಿಸಬೇಕು ಅಥವಾ ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-೫೬೦೦೦೧ ಇಲ್ಲಿಗೆ ನವೆಂಬರ್ ೧೦ ರೊಳಗೆ ಅರ್ಜಿ ಕಳುಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ರೂಪ ತಿಳಿಸಿದ್ದಾರೆ.