ಮಡಿಕೇರಿ, ಅ. 21: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ತಾ. 22 ರಂದು (ಇಂದು) ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಅತ್ಯುತ್ತಮ ವರದಿಗಳಿಗೆ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಮಾಜಿ ಸಚಿವರು, ಹಾಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಾ.ರಾ.ಮಹೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಭಾಷಣಗಾರರಾಗಿ ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ, ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಷ್ಟ್ರೀಯ ಸಮಿತಿ ಸದಸ್ಯ ಸುನಿಲ್ ಪೆÇನ್ನೇಟಿ, ರಾಜ್ಯ ಸಮಿತಿ ಸದಸ್ಯ ಟಿ.ಎನ್.ಮಂಜುನಾಥ್ ಸೇರಿದಂತೆ ತಾಲೂಕು ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.