ಮಡಿಕೇರಿ, ಅ. ೨೨: ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವ ಧನದ ಆಧಾರದ ಮೇಲೆ ೯ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ ೧೫ ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ. ೧೦ ಸಾವಿರ ನಿಗದಿಪಡಿಸಿದೆ. ಕಡ್ಡಾಯವಾಗಿ ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಡಿಎಡ್ ಅಥವಾ ಬಿಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಅವರ ಕಚೇರಿ ಹೊಸ ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೦೦೫೦೦ ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.