ಸೋಮವಾರಪೇಟೆ, ಅ. ೨೨: ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಎಸ್.ವಿ. ನರಗುಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನ. ೧ ರಂದು ಬೆಳಿಗ್ಗೆ ೯ ಗಂಟೆಗೆ ಪಟ್ಟಣದ ಜೇಸಿ ವೇದಿಕೆಯಿಂದ ಶಾಲಾ-ಕಾಲೇಜುಗಳ ಸ್ತಬ್ಧಚಿತ್ರಗಳ ಮೆರವಣಿಗೆ ಪ್ರಾರಂಭವಾಗಲಿದೆ. ನಂತರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮ, ಶಾಲಾ-ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ ಎಂದು ತಹಶೀಲ್ದಾರ್ ತಿಳಿಸಿದರು.
ತಾ. ೨೮ರಂದು ಜೇಸಿ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ೧೧ ಗಂಟೆಗೆ ನಡೆಯಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ೨ ಸಾವಿರಕ್ಕೂ ಅದಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಮಿತಿಯ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಪದಾಧಿಕಾರಿಗಳಾದ ಎಸ್. ಮಹೇಶ್, ಎಸ್.ಡಿ. ವಿಜೇತ, ಜಯಪ್ಪ ಹಾನಗಲ್ ಮತ್ತು ವಿವಿಧ ಇಲಾಧಿಕಾರಿಗಳು ಇದ್ದರು.