ಶ್ರೀಮಂಗಲ, ಅ. ೨೨: ಪೊನ್ನಂಪೇಟೆ ಕೊಡವ ಸಮಾಜದಿಂದ ಕೊಡವ ಜಾನಪದ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉಚಿತ ಕೊಡವ ಆಟ್‌ಪಾಟ್, ಪಡಿಪು ಶಿಬಿರ ಹಮ್ಮಿಕೊಂಡಿರುವುದಾಗಿ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ತಿಳಿಸಿದ್ದಾರೆ. ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆಯಲ್ಲಿ ನವೆಂಬರ್ ೧ ರಿಂದ ಸಂಜೆ ೫ ಗಂಟೆಗೆ ಪ್ರತಿದಿನ ಆಟ್‌ಪಾಟ್ ಪಡಿಪು ಕಾರ್ಯಕ್ರಮ ನಡೆಯಲಿದೆ. ಆಸಕ್ತರು ಪೊನ್ನಂಪೇಟೆ ಕೊಡವ ಸಮಾಜದ ಕಚೇರಿಯಲ್ಲಿ ಅಥವಾ ನೇರವಾಗಿ ತರಬೇತಿ ಕಾರ್ಯಕ್ರಮಕ್ಕೆ ಹಾಜರಾಗಬಹುದೆಂದು ಅವರು ತಿಳಿಸಿದ್ದಾರೆ.