ಗೋಣಿಕೊಪ್ಪಲು, ಅ. 21: ಕಂಡಂಗಾಲ ರುದ್ರಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಕ್ಕೆ ನಿರ್ಮಿಸಲಾಗಿದ್ದ ರೂ. 5 ಲಕ್ಷ ವೆಚ್ಚದ ಪೂರ್ಣಗೊಂಡ ತಡೆಗೋಡೆ ಕಾಮಗಾರಿಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ರುದ್ರಗುಪ್ಪೆ ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗದಲ್ಲಿ ತಡೆಗೋಡೆ ನಿರ್ಮಿಸಲು ಇಲ್ಲಿನ ಗ್ರಾಮಸ್ಥರು ಶಾಸಕರ ಬಳಿ ಮನವಿ ಮಾಡಿದ್ದರು. ಗ್ರಾಮೀಣ ಭಾಗದ ಸಂಘದ ತಡೆಗೋಡೆಗೆ ಶಾಸಕರು ರೂ. 5 ಲಕ್ಷ ಅನುದಾನವನ್ನು ನೀಡುವ ಮೂಲಕ ಈ ಭಾಗದ ರೈತರ ಅನುಕೂಲಕ್ಕಾಗಿರುವ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ತಡೆಗೋಡೆ ನಿರ್ಮಿಸಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ವೇಳೆ ಮಾತನಾಡಿದರು.

ರುದ್ರಗುಪ್ಪೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಾಸು ಮುದ್ದಯ್ಯ, ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಸದಸ್ಯ ಮೂಕಚಂಡ ಪ್ರಸನ್ನ ಸುಬ್ಬಯ್ಯ, ಬಿಟ್ಟಂಗಾಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಅಪ್ಪಂಡೇರಂಡ ದಿನು ದೇವಯ್ಯ, ಬಿಜೆಪಿ ಪಕ್ಷದ ಮುಖಂಡ ತೀತಿಮಾಡ ಲಾಲಾ ಭೀಮಯ್ಯ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾದ ನಾಮೇರ ಬಿ. ನವೀನ್, ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ, ಬಿ. ಶೆಟ್ಟಿಗೇರಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷ ಗಿರೀಶ್, ಬಿ. ಶೆಟ್ಟಿಗೇರಿ ಶಕ್ತಿ ಕೇಂದ್ರದ ಪ್ರಮುಖ್ ವಿಜು ಕುಶಾಲಪ್ಪ, ಜಿ.ಪಂ. ಮಾಜಿ ಅಧ್ಯಕ್ಷೆ ಅಪ್ಪಂಡೇರಂಡ ಭವ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸಿದ್ದೇಗೌಡ, ಶಾಸಕರ ಆಪ್ತ ಸಹಾಯಕ ಮಲ್ಲಂಡ ಮಧು ಸೇರಿದಂತೆ ಗ್ರಾಮದ ಹಿರಿಯರು, ಬಿಜೆಪಿ ಪಕ್ಷದ ಮುಖಂಡರು ಭಾಗವಹಿಸಿದ್ದರು.