ಮಡಿಕೇರಿ, ಅ. ೨೨: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಶಿಬಿರ ಮುಕ್ತಾಯಗೊಂಡಿದೆ.

ಎರಡು ದಿನಗಳ ಕಾಲ ನಡೆದ ಈ ನಾಯಕತ್ವ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮುಂಬೈನ ಎಂ.ಆರ್.ಪೈ ಫೌಂಡೇಶನ್ ತರಬೇತುದಾರÀ ಸಚಿನ್ ಕಾಮತ್ ಹಾಗೂ ರಾಜೀವ್‌ಕುಮಾರ್ ಲವ್ ಯಶಸ್ವಿಯಾಗಿ ಶಿಬಿರವನ್ನು ನಡೆಸಿಕೊಟ್ಟರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಪಾಲ್ಗೊಂಡು ಮಾತನಾಡಿ ಇಂತಹ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲಿದೆ. ಅಲ್ಲದೆ ಆತ್ಮಸ್ಥೆöÊರ್ಯ ಹೆಚ್ಚಾಗಲು ಇಂತಹ ಶಿಬಿರಗಳು ಸಹಕಾರಿ ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ನಿರ್ದೇಶಕ ಮೂಡೇರ ಕಾಳಯ್ಯ, ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು. ಉಪನ್ಯಾಸಕ ಹರೀಶ್ ಕಿಗ್ಗಾಲು ಸ್ವಾಗತಿಸಿ, ನಿರೂಪಿಸಿದರೆ, ಉಪನ್ಯಾಸಕ ಸೋಮಯ್ಯ ವಂದಿಸಿದರು.