ಮಡಿಕೇರಿ, ಅ. ೨೨: ಕೊಡಗು ಪತ್ರಿಕಾ ಭವನ ಟ್ರಸ್ಟ್ನ ವಾರ್ಷಿಕೋತ್ಸವದ ಪ್ರಯುಕ್ತ ತಾ. ೨೩ ರಂದು (ಇಂದು) ನಗರದ ಪತ್ರಿಕಾ ಭವನದಲ್ಲಿ ಕೊಡಗು ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪತ್ರಕರ್ತರಿಗೆ ಒಳಾಂಗಣ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ಕ್ರೀಡಾಕೂಟದ ಉದ್ಘಾಟನೆಗೆ ಅತಿಥಿಗಳಾಗಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಹಿರಿಯ ಚೆಸ್ ಆಟಗಾರ ಶಂಕರ ನಾರಾಯಣ್ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.