ನಾಪೆÇೀಕ್ಲು, ಅ. 21: ಸಮೀಪದ ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಡಾನೆಗಳ ಹಿಂಡು ಬಡಕಡ ಎಂ. ತಿಮ್ಮಯ್ಯ, ರಮೇಶ್ ಮತ್ತು ಮಂಞಂಡ್ರ ಕುಟುಂಬಸ್ಥರ ಭತ್ತದ ಗದ್ದೆಗೆ ದಾಳಿ ನಡೆಸಿದ್ದು ಭತ್ತದ ಪೈರು ಸಂಪೂರ್ಣ ನಾಶವಾಗಿದೆ.
ಇತ್ತೀಚಿನ ದಿನಗಳಲ್ಲಿ ಚೆಯ್ಯಂಡಾಣೆ, ಕಕ್ಕಬ್ಬೆ, ಮರಂದೋಡ, ಯವಕಪಾಡಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸುತ್ತಿದ್ದು ತೋಟದ ಫಸಲು, ಭತ್ತದ ಬೆಳೆ ಸೇರಿದಂತೆ ಕೃಷಿ ಉತ್ಪನ್ನಗಳು ಹಾನಿಗೊಳಗಾಗುತ್ತಿರುವ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಲಿ ಕಾರ್ಮಿಕರು ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿರುವುದು ಒಂದು ಕಡೆಯಾದರೆ ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಭಯಬೀತರಾಗಿರುವುದರಿಂದ ಕೂಡಲೇ ಅರಣ್ಯ ಇಲಾಖೆ ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.