ಸುಂಟಿಕೊಪ್ಪ, ಅ. 21: ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದರೊಂದಿಗೆ ಪಟಾಕಿ ಸಿಡಿತದಿಂದ ಆಗುವ ಅನಾಹುತದ ಬಗ್ಗೆ ಸುಂಟಿಕೊಪ್ಪ ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ‘ಪರಿಸರ ಸ್ನೇಹಿ ದೀಪಾವಳಿ ಆಚರಣೆ' ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಪರಿಸರ ಜಾಗೃತಿ ಆಂದೋಲನ ದಲ್ಲಿ 850ಕ್ಕೂ ಹೆಚ್ಚು ಶಾಲಾ ಮಕ್ಕಳು ಜತೆಗೂಡಿ ‘ಹಣತೆ ಹಚ್ಚೋಣ ಬನ್ನಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ', 'ಹಣತೆ ಹಚ್ಚೋಣ, ಪಟಾಕಿ ತ್ಯಜಿಸೋಣ', ‘ಪರಿಸರ ಉಳಿಸೋಣ' ಎಂಬ ಪರಿಸರ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಸಂಕಲ್ಪ ಮಾಡಿದರು.
ಮಣ್ಣಿನ ಹಣತೆಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಹಸಿರು ದೀಪಾವಳಿ ಹಬ್ಬದ ಸಂದರ್ಭ ಹಣತೆ (ದೀಪ) ಬೆಳಗಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ವಾದುದು ಎಂದರು.
ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಪಟಾಕಿ ಸಿಡಿಸುವು ದರಿಂದ ಹಣದ ದುಂದುವೆಚ್ಚದ ಜತೆಗೆ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ, ವಾಯು ಮಾಲಿನ್ಯ, ಶಬ್ದ ಮಾಲಿನ್ಯದ ಜತೆಗೆ ಹಾನಿಕಾರಕವಾದ ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಮಾಲಿನ್ಯಕಾರ, ಪಟಾಕಿಯನ್ನು ಬಿಟ್ಟು ದೀಪಾವಳಿ ಆಚರಿಸಲು ವಿದ್ಯಾರ್ಥಿ ಗಳು ಕಂಕಣಬದ್ಧರಾಗಬೇಕಿದೆ ಎಂದರು. ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಅಪಾಯಕಾರಿ ಪಟಾಕಿ ಸಿಡಿಸುವು ದರಿಂದ ಕಣ್ಣಿನ ದೋಷ, ಚರ್ಮದ ಕಾಯಿಲೆ, ಕ್ಯಾನ್ಸರ್ ಕಾಯಿಲೆ ಸೇರಿದಂತೆ ವಿಷಕಾರಿ ಅನಿಲ ಬಿಡುಗಡೆ ಗೊಂಡು ಪಕ್ಷಿ-ಪ್ರಾಣಿ ಜೀವ ಸಂಕುಲಕ್ಕೆ ತೊಂದರೆಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂತಮೇರಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಅರುಳ್ ಸೆಲ್ವಕುಮಾರ್ ಮಾತನಾಡಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಪಟಾಕಿ ಸಿಡಿಸುವು ದರಿಂದ ಹಣದ ದುಂದುವೆಚ್ಚದ ಜತೆಗೆ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ, ವಾಯು ಮಾಲಿನ್ಯ, ಶಬ್ದ ಮಾಲಿನ್ಯದ ಜತೆಗೆ ಹಾನಿಕಾರಕವಾದ ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಮಾಲಿನ್ಯಕಾರ, ಪಟಾಕಿಯನ್ನು ಬಿಟ್ಟು ದೀಪಾವಳಿ ಆಚರಿಸಲು ವಿದ್ಯಾರ್ಥಿ ಗಳು ಕಂಕಣಬದ್ಧರಾಗಬೇಕಿದೆ ಎಂದರು. ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಅಪಾಯಕಾರಿ ಪಟಾಕಿ ಸಿಡಿಸುವು ದರಿಂದ ಕಣ್ಣಿನ ದೋಷ, ಚರ್ಮದ ಕಾಯಿಲೆ, ಕ್ಯಾನ್ಸರ್ ಕಾಯಿಲೆ ಸೇರಿದಂತೆ ವಿಷಕಾರಿ ಅನಿಲ ಬಿಡುಗಡೆ ಗೊಂಡು ಪಕ್ಷಿ-ಪ್ರಾಣಿ ಜೀವ ಸಂಕುಲಕ್ಕೆ ತೊಂದರೆಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂತಮೇರಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಅರುಳ್ ಸೆಲ್ವಕುಮಾರ್ ಮಾತನಾಡಿ, ಇಂತಹ ಪರಿಸರ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ, ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ವಿಜ್ಞಾನ ಪರಿಷತ್ತಿನ ಸಂಘಟನೆ ಮೂಲಕ ಹಸಿರು ದೀಪಾವಳಿ ಆಚರಣೆಯನ್ನು ಯಶಸ್ವಿಯಾಗಿ ಸಂಘಟಿಸಿ ಆಚರಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ಮೂಡಿಸುತ್ತಿರುವುದು ಶ್ಲಾಘನೀಯ ವಾದುದು ಎಂದರು.
ನಂತರ ನಡೆದ ಪರಿಸರ ಸಂವಾದದಲ್ಲಿ ಮಾತನಾಡಿದ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ. ರಘು ರಾಮ್, ಸರ್ಕಾರದ ನಿರ್ದೇಶನದಂತೆ ಹಸಿರು ದೀಪಾವಳಿ ಆಚರಿಸ ಲಾಗುತ್ತಿದ್ದು, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯು ಮಾಲಿನ್ಯ ಮತ್ತು ದುರಂತ ಸಂಭವಿಸುವುದನ್ನು ತಡೆಗಟ್ಟಲು ಇಂತಹ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲ ಬಿ.ವಿ. ಮಲ್ಲೇಶಪ್ಪ, ಜಿಲ್ಲಾ ಪ್ರೌಢಶಾಲಾ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಕಾರ್ಯದರ್ಶಿ ಹೆಚ್.ಜಿ. ಕುಮಾರ್, ಜಿಲ್ಲಾ ಸ್ಕೌಟ್ಸ್ ಸಂಸ್ಥೆಯ ಪ್ರಮುಖರಾದ ಜಿಮ್ಮಿ ಸಿಕ್ವೇರಾ, ಹೆಚ್.ಆರ್. ಮುತ್ತಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಶ್ರೀನಿವಾಸ್, ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಶಾಲಾ ಪ್ರಿನ್ಸಿಪಾಲ್ ಆರ್. ಸೆಲ್ವರಾಜು, ಪರಿಷತ್ತಿನ ಪದಾಧಿಕಾರಿಗಳಾದ ಜಿ. ಶ್ರೀಹರ್ಷ, ಕೆ.ಎಸ್. ಅಶ್ವಿನಿ, ಎನ್.ಕೆ. ಮಾಲಾ ದೇವಿ, ಸಿಆರ್‍ಪಿ ಸೀಮಾ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಡಿ.ಪಿ. ಧರ್ಮಪ್ಪ, ದಯಾನಂದ ಪ್ರಕಾಶ್, ಬಿ.ಪಿ. ಉತ್ತಪ್ಪ, ಡಿ. ಚಂದನ ಇತರರು ಇದ್ದರು. ಶಿಕ್ಷಕಿ ಎನ್.ಕೆ. ಮಾಲಾದೇವಿ ಪರಿಸರ ಗೀತೆ ಹಾಡಿದರು. ಶಿಕ್ಷಕ ಜಿ. ಶ್ರೀಹರ್ಷ ವಂದಿಸಿದರು.
ಜಾಗೃತಿ ಅಭಿಯಾನ: ನಂತರ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಣತೆ ಹಚ್ಚೋಣ, ಹಸಿರು ದೀಪಾವಳಿ ಆಚರಿಸೋಣ, ಮಾಲಿನ್ಯಕಾರಿ ಪಟಾಕಿ ತ್ಯಜಿಸೋಣ ಮಾಲಿನ್ಯ ತಡೆಯೋಣ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದ ವಿದ್ಯಾರ್ಥಿಗಳು ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು.