ಮಡಿಕೇರಿ, ಅ. ೨೨: ಕಂಡಕರೆಯ ಗಾಂಧಿ ಯುವಕ ಸಂಘ ವತಿಯಿಂದ ಮೊದಲನೆಯ ವರ್ಷದ ಅಂಡರ್ ೨೦ ಕಾಲ್ಚೆಂಡು ಪಂದ್ಯಾವಳಿ ಚೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾ. ೨೩ರಂದು (ಇಂದು) ಹಾಗೂ ೨೪ರಂದು ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಷರೀಫ್ ಪಿ.ಎಂ. ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾ.೨೩ ರಂದು ಬೆಳಿಗ್ಗೆ ೯ ಗಂಟೆಗೆ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ಯುವಕ ಸಂಘದ ಅಧ್ಯಕ್ಷ, ಪತ್ರಕರ್ತ ಇಸ್ಮಾಯಿಲ್ ಕಂಡಕರೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ರಸೀನಾ, ಗಾಂಧಿ ಯುವಕ ಸಂಘದ ಸಂಘಟನಾ ಕಾರ್ಯದರ್ಶಿ ಸುಹೈಲ್ ಓ.ಎಸ್ ಭಾಗವಹಿಸಲಿದ್ದಾರೆ.
ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್ ರವರನ್ನು ಗಾಂಧಿ ಯುವಕ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ಒಟ್ಟು ೩೦ ತಂಡಗಳು ಭಾಗವಹಿಸಲಿದ್ದು, ತಾ. ೨೪ರಂದು ಫೈನಲ್ ಪಂದ್ಯಾವಳಿ ನಡೆಯಲಿದೆ ಎಂದು ಷರೀಫ್ ತಿಳಿಸಿದ್ದಾರೆ.