ಸುAಟಿಕೊಪ್ಪ, ಅ. ೨೩: ದೇಶ ವನ್ನು ಕ್ಷಯರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ೨೦೨೫ರಲ್ಲಿ ಕ್ಷಯರೋಗ ಮುಕ್ತ ದೇಶವನ್ನಾಗಿ ಮಾಡುವ ಸಲುವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಜಿಲ್ಲೆಯಲ್ಲಿ ೨೦೮ ಮಂದಿ ಕ್ಷಯರೋಗಕ್ಕೆ ತುತ್ತಾಗಿದ್ದು, ಸೋಮವಾರಪೇಟೆ ತಾಲೂಕಿನಲ್ಲಿ ೧೦೩ ಮಂದಿ ರೋಗಿಗಳಿದ್ದಾರೆ. ಇವರಿಗೆ ರಾಜ್ಯ ಸರಕಾರದಿಂದ ಆಹಾರ ಔಷದಿ ಇತರ ಎಲ್ಲಾ ಸವಲತ್ತುಗಳನ್ನು ನೀಡುತ್ತಿದೆ. ಪ್ರತೀ ಗ್ರಾಮಗಳಿಗೆ ತೆರಳಿ ಕ್ಷಯ ರೋಗಿಗಳನ್ನು ಗುರುತಿಸಿ ಅವರನ್ನು ದತ್ತು ಪಡೆದು ಅವರ ಯೋಗಕ್ಷೇಮದ ಬಗ್ಗೆ ನಿಗಾವಹಿಸಿ ಚಿಕಿತ್ಸೆ ನೀಡಲಾಗು ತ್ತದೆ. ಅಲ್ಲದೆ ೨೦೨೫ರ ವೇಳೆಗೆ ಕೊಡಗು ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸುವ ಭರವಸೆ ನೀಡಿದರು. ಇದೇ ಸಂದರ್ಭ ಕ್ಷಯರೋಗಿಗಳಿಗೆ ಆಹಾರ ಔಷದಿ ಕಿಟ್ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಾ: ಶÀಶಿಕಾಂತ್ ರೈ, ಪಕ್ಷದ ಮುಖಂಡರು ಹಾಜರಿದ್ದರು.