ವೀರಾಜಪೇಟೆ, ಅ. ೨೨: ಕೊರೊನಾ ಹಾಗೂ ಪ್ರಕೃತಿ ವಿಕೋಪ ದಿಂದ ಕಳೆದ ಮೂರು ವರ್ಷಗಳಿಂದ ರಾಷ್ಟಿçÃಯ ಹಬ್ಬಗಳನ್ನು ವಿಜೃಂಭಣೆ ಯಿಂದ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇತರ ಇಲಾಖೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಅದ್ಧೂರಿ ಯಾಗಿ ಆಚರಿಸಲಾಗುವುದು ಎಂದು ವೀರಾಜಪೇಟೆ ತಹಶೀಲ್ದಾರ್ ಅರ್ಚನಾ ಭಟ್ ಹೇಳಿದರು.
ಮಿನಿ ವಿಧಾನಸೌಧ ಸಭಾಂಗಣ ದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಬಗ್ಗೆ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾಷೆ, ನೆಲ, ಜಲದ ಬಗ್ಗೆ ನಿರ್ಲಕ್ಷö್ಯ ವಹಿಸಬಾರದು. ಪ್ರತಿ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಸರ್ಕಾರಿ ಕಚೇರಿಗಳನ್ನು ಲೈಟಿಂಗ್ಸ್ ಹಾಕಿ ಸಿಂಗರಿಸುವAತೆ ನಿರ್ಣಯ ಕೈಗೊಳ್ಳಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ದೊಡ್ಡಟ್ಟಿ ಚೌಕಿಯಿಂದ ತಾಲೂಕು ಮೈದಾನ ದವರೆಗೆ ಮೆರವಣಿಗೆ ನಡೆಸಲಾ ಗುವುದು. ಮೈದಾನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ಕಳೆದ ಸಾಲಿನಲ್ಲಿ ಎಸ್.ಎಸ್. ಎಲ್.ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ನ ತಾಲೂಕು ಅಧ್ಯಕ್ಷ ಡಿ.ಪಿ ರಾಜೇಶ್ ಮಾತನಾಡಿ ಡಿಸೆಂಬರ್ ತಿಂಗಳಲ್ಲಿ ವೀರಾಜಪೇಟೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ. ತಾಲೂಕು ಆಡಳಿತ ನಡೆಸುವ ಕನ್ನಡ ರಾಜ್ಯೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು. ತಾಲೂಕಿನಾದ್ಯಂತ ಇರುವ ಅಂಗಡಿ ಮುಂಗಟ್ಟು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಲು ತಾಲೂಕು ಆಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಗಮನ ಸೆಳೆದರು. ಸಭೆಯಲ್ಲಿ ತಾಲೂಕು ಪುರಸಭೆ ಅಧ್ಯಕ್ಷೆ ಸುಶ್ಮಿತಾ, ಕಾರ್ಯ ನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್, ಬಿಇಒ ಶ್ರೀಶೈಲಾ ಬಿಳಗಿ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಸೇರಿದಂತೆ ಅರಣ್ಯ, ಚೆಸ್ಕಾಂ, ಖಜಾನೆ, ಅಬಕಾರಿ ಇಲಾಖಾ ಅಧಿಕಾರಿಗಳು, ಮಾಜಿ ಸೈನಿಕರ ಸಹಕಾರ ಸಂಘ, ನಗರ ಚೇಂಬರ್ ಆಫ್ ಕಾಮರ್ಸ್ನ ಪದಾಧಿಕಾರಿಗಳು ಭಾಗವಹಿಸಿದ್ದರು.