ಸುಂಟಿಕೊಪ್ಪ, ಅ. ೨೨: ಸುಂಟಿಕೊಪ್ಪ ಪ್ರೌಢಶಾಲಾ ಬಿಸಿಯೂಟ ಅಕ್ಷರ ದಾಸೋಹದ ನವೀಕರಣಗೊಂಡ ಕೊಠಡಿಯನ್ನು ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಉದ್ಘಾಟಿಸಿದರು.
ಬೋಜೇಗೌಡ ಅವರ ಶಾಸಕರ ಅನುದಾನದಲ್ಲಿ ಸರಕಾರಿ ಪ್ರೌಢಶಾಲೆಯ ಅಕ್ಷರ ದಾಸೋಹದ ಅಡುಗೆ ಕೊಠಡಿ ರೂ. ೨ ಲಕ್ಷ ವೆಚ್ಚದಲ್ಲಿ ನವೀಕರಣಗೊಳಿಸಲಾಗಿದ್ದು, ಶಾಸಕರು ಉದ್ಘಾಟಿಸಿದರು.
ಈ ಸಂದರ್ಭ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಕೊಡಗು ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ಧಬಸಪ್ಪ, ಸಹ ಕಾರ್ಯದರ್ಶಿ ಹೆಚ್.ಎನ್. ಚೇತನ್, ಕೂಡಿಗೆ ಡಯಟ್ ಉಪನಿರ್ದೇಶಕ ಮಲ್ಲೇಶಪ್ಪ, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ, ಪ್ರೌಢಶಾಲೆಯ ಸಹಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.