ಸೋಮವಾರಪೇಟೆ, ಅ. ೨೩: ಕರ್ನಾಟಕದ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟಿçÃಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಾಂಗ್ರೆಸ್‌ನ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಅಭಿಪ್ರಾಯಿಸಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯ ಮುತ್ಸದ್ದಿ ಯಾಗಿರುವ ಮಲ್ಲಿಕಾರ್ಜುನ ಖರ್ಗೆ ಯವರು ಕಾಂಗ್ರೆಸ್‌ನ ಚುಕ್ಕಾಣಿ ಹಿಡಿದಿರುವುದು ಪಕ್ಷಕ್ಕೆ ಹೆಚ್ಚಿನ ಬಲ ತುಂಬಿದೆ. ಕರ್ನಾಟಕದ ಮುಖಂಡರಿಗೆ ಈ ಸ್ಥಾನ ಲಭಿಸಿರುವುದು ಪಕ್ಷ ಸಂಘಟನೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದರು.

ಪ್ರಮುಖರಾದ ಡಾ. ಮಂಥರ್‌ಗೌಡ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ಹಾಗೂ ಅನುಭವಿ ರಾಜಕಾರಣಿಯಾಗಿದ್ದಾರೆ. ಇವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಬಲಿಷ್ಠವಾಗಲಿದೆ. ಕನ್ನಡಿಗ ರೋರ್ವರಿಗೆ ಈ ಸ್ಥಾನ ಲಭಿಸಿರುವುದು ಹೆಮ್ಮೆಯ ವಿಷಯ ಎಂದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದ ಕೆ.ಎ. ಯಾಕೂಬ್, ನಂದಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ. ಮಿಥುನ್, ಚೇತನ್, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಎಸ್.ಎಂ. ಡಿಸಿಲ್ವಾ, ಬ್ಲಾಕ್ ಕಾರ್ಯದರ್ಶಿ ಸುನಿಲ್, ಬಸವರಾಜು, ಪ.ಪಂ. ಸದಸ್ಯೆ ಶೀಲಾ ಡಿಸೋಜ, ಗ್ರಾ.ಪಂ. ಸದಸ್ಯೆ ಸುಶೀಲ ಹಾನಗಲ್, ಮೀನಾಕುಮಾರಿ ಸೇರಿದಂತೆ ಇತರರು ಹಾಜರಿದ್ದರು.

ನಂತರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಲಾಯಿತು.