ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ

ಕೂಡಿಗೆ, ಅ. ೨೩: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ. ಚೆÀಲುವರಾಜ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಬೀಡಾಡಿ ದನಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಗಳು ನಡೆದವು. ನಂತರ ದನಗಳ ವಾರಸುದಾರರಿಗೆ ನೋಟೀಸ್ ನೀಡುವಂತೆ ತೀರ್ಮಾನಿಸಲಾಯಿತು. ಕ್ರಮ ಕೈಗೊಳ್ಳದಿದ್ದರೆ ಗೋಶಾಲೆಗೆ ಬಿಡುವಂತೆ ಸದಸ್ಯರು ಒತ್ತಾಯಿಸಿದರು. ಸ್ವಚ್ಛತೆಗೆ ಸಂಬAಧಿಸಿದAತೆ ಹಾಜರಿದ್ದ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ವಿಷಯಗಳ ಬಗ್ಗೆ ಚರ್ಚಿಸಿ ಕ್ರಮ ವಹಿಸುವ ಬಗ್ಗೆ ತೀರ್ಮಾನಿಸ ಲಾಯಿತು. ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಜನಸಂಖ್ಯೆ ಹೆಚ್ಚಿದೆ. ಹೆಚ್ಚು ಸದಸ್ಯರುಗಳನ್ನು ಒಳಗೊಂಡಿದೆ. ಇದರಿಂದಾಗಿ ಕಾರ್ಯದರ್ಶಿ ಮತ್ತು ಬಿಲ್ ಕಲೆಕ್ಟರ್ ಇಲ್ಲದಿರುವುದರಿಂದಾಗಿ ಕಂದಾಯ ವಸೂಲಿಗೆ ತೊಂದರೆ ಆಗುತ್ತಿವೆ. ತುರ್ತಾಗಿ ಸಂಬAಧಿಸಿದ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅವರು ಸಿಬ್ಬಂದಿಗಳನ್ನು ನೇಮಕ ಮಾಡಿಕೊಡುವಂತೆ ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಬಗ್ಗೆ, ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಉಪಾಧ್ಯಕ್ಷೆ ಜಯಮ್ಮ, ಅಭಿವೃದ್ಧಿ ಅಧಿಕಾರಿ ಸುಮೇಶ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.