ಮಡಿಕೇರಿ, ಅ. ೨೩: ಪ್ರಸಕ್ತ (೨೦೨೨-೨೩) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ ೧೦ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ.೨.೫೦ ಲಕ್ಷ, ಪ್ರವರ್ಗ-೨ಎ,೨ಬಿ, ೩ಎ, ೩ಬಿ ರೂ.೧ ಲಕ್ಷ. ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂ. ೯೮೪೪೫೩೧೦೪೦ ಮತ್ತು ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೯೪೮೧೭೭೨೧೪೩ ಗೆ ಕಚೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.