ನಾಪೋಕ್ಲು, ಅ. ೨೩: ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯದ ಮೇಲ್ಬಾಗದಲ್ಲಿ ವಿದ್ಯುತ್ ತಂತಿಗಳು ಅಪಾಯದಂಚಿನಲ್ಲಿ ಹಾದು ಹೋಗಿದ್ದು, ಅದನ್ನು ಬದಲಾಯಿಸ ಬೇಕು. ಕೀಯಲ್ಕೇರಿಯಲ್ಲಿ ವಿದ್ಯುತ್ ಸಮಸ್ಯೆ ಕಾಡುತ್ತಿದೆ, ವಿದ್ಯುತ್ ಪರಿವರ್ತಕದಿಂದ ಪ್ರತ್ಯೇಕ ಸಂಪರ್ಕ ನೀಡಬೇಕು. ದೊಡ್ಡ ಪುಲಿಕೋಟು ಶಾಲೆಯ ಮುಂಭಾಗದ ಬಸ್ಸು ತಂಗುದಾಣವನ್ನು ದುರಸ್ತಿಪಡಿಸಬೇಕು ಎಂಬಿತ್ಯಾದಿ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು. ಬಲ್ಲಮಾವಟಿ, ಪುಲಿಕೋಟು, ಪೇರೂರು ಮತ್ತು ನೆಲಜಿ ಗ್ರಾಮ ವ್ಯಾಪ್ತಿಗೆ ಸಂಬAಧಪಟ್ಟ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಪಿಂಚಣಿದಾರರ ಸಂಘದ ಕಟ್ಟಡದಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಸಭೆಯ ಮುಂದಿಟ್ಟು ಪರಿಹಾರಕ್ಕೆ ಒತ್ತಾಯಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ ಮಾತನಾಡಿ ಪೇರೂರು ಗ್ರಾಮದ ಕೀಯಲ್ ಕೇರಿಯಲ್ಲಿ ವಿದ್ಯುತ್ ಪರಿವರ್ತಕ ಇದ್ದರೂ ಗ್ರಾಮಸ್ಥರಿಗೆ ಸಮಸ್ಯೆ ಕಾಡುತ್ತಿದೆ. ಗ್ರಾಮದ ಜನರು ಕತ್ತಲಲ್ಲಿ ಮುಳುಗುತ್ತಿದ್ದಾರೆ. ವೋಲ್ಟೇಜ್ ಸಮಸ್ಯೆ ಕಾಡುತ್ತಿದೆ. ಕೆಲವೆಡೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದು ವಿದ್ಯುತ್ ತಂತಿಗಳನ್ನು ಸರಿಯಾಗಿ ವ್ಯಾಪ್ತಿಗೆ ಸಂಬAಧಪಟ್ಟ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಪಿಂಚಣಿದಾರರ ಸಂಘದ ಕಟ್ಟಡದಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಸಭೆಯ ಮುಂದಿಟ್ಟು ಪರಿಹಾರಕ್ಕೆ ಒತ್ತಾಯಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಮಚ್ಚುರ ರವೀಂದ್ರ ಮಾತನಾಡಿ ಪೇರೂರು ಗ್ರಾಮದ ಕೀಯಲ್ ಕೇರಿಯಲ್ಲಿ ವಿದ್ಯುತ್ ಪರಿವರ್ತಕ ಇದ್ದರೂ ಗ್ರಾಮಸ್ಥರಿಗೆ ಸಮಸ್ಯೆ ಕಾಡುತ್ತಿದೆ. ಗ್ರಾಮದ ಜನರು ಕತ್ತಲಲ್ಲಿ ಮುಳುಗುತ್ತಿದ್ದಾರೆ. ವೋಲ್ಟೇಜ್ ಸಮಸ್ಯೆ ಕಾಡುತ್ತಿದೆ. ಕೆಲವೆಡೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದು ವಿದ್ಯುತ್ ತಂತಿಗಳನ್ನು ಸರಿಯಾಗಿ ಮಾತನಾಡಿ ಗ್ರಾಮಸ್ಥರು ಆಯುಷ್ಮಾನ್ ಭಾರತ್ ಕಾರ್ಡ್ನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದರು. ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಶುಭಾ ಮಾತನಾಡಿ ಆಯುಷ್ ಚಿಕಿತ್ಸಾಲಯವನ್ನು ಆಯುರ್ವೇದ ಕ್ಷೇಮ ಕೇಂದ್ರವಾಗಿ ಮೇಲ್ದರ್ಜೆ ಗೇರಿಸಲಾಗಿದೆ. ಕ್ಷೇಮ ಕೇಂದ್ರದ ಮೇಲ್ಬಾಗದಲ್ಲಿ ಯೋಗ ಹಾಲ್ ನಿರ್ಮಾಣವಾಗುತ್ತಿದೆ. ಗ್ರಾಮಸ್ಥರು ಕ್ಷೇಮ ಕೇಂದ್ರದ ಸದ್ಬಳಕೆ ಮಾಡಿ ಕೊಳ್ಳಬೇಕು ಎಂದರು. ಉದ್ಯೋಗ ಖಾತ್ರಿ ಯೋಜನೆಯ ಅಧಿಕಾರಿ ಅಕ್ಷಿತ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣವಟ್ಟಿರ ಹರೀಶ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಉಪಾಧ್ಯಕ್ಷೆ ಬಾಳೆಯಡ ದೀನಾ ಮಾಯಮ್ಮ ಸದಸ್ಯರಾದ ರಾಜೀವಿ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಚೊಕೀರ ಬಾಬಿ ಭೀಮಯ್ಯ, ಪಿಡಿಒ ಚೌರೀರ ಪೂಣಚ್ಚ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.