ಕೂಡಿಗೆ, ಅ. ೨೩: ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಅಖಿಲ ಭಾರತ ಸನ್ಯಾಸಿ ಸಂಘ ಇವರ ವತಿಯಿಂದ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ಕಾವೇರಿ ನದಿಯ ದಂಡೆಯಲ್ಲಿ ಕಾವೇರಿ ವಿಗ್ರಹವನ್ನು ಇಟ್ಟು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಕಾವೇರಿ ನದಿ ಸ್ವಚ್ಛತಾ ಆಂದೋಲನದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತಾಡುತ್ತಾ ಕಾವೇರಿ ನದಿ ಟ್ರಸ್ಟ್ನ ಆಶ್ರಯದಲ್ಲಿ ಕಾವೇರಿ ನದಿ ಪಾತ್ರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಾವೇರಿ ಜಾಗೃತಿ ರಥ ಯಾತ್ರೆಯು ವರ್ಷಂಪ್ರತಿಯAತೆ ಈ ಬಾರಿಯು ತಲಕಾವೇರಿಯಿಂದ ಪೂಂಪ್ ಹಾರ್ ವರೆಗೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ.

ಮಾರ್ಗ ಮಧ್ಯದ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ಕಾವೇರಿ ನದಿಗೆ ವಿಶೇಷ ಪೂಜೆ ನಂತರ ರಾಮನಾಥಪುದಲ್ಲಿ ಕಾವೇರಿ ನದಿ ವಿಶೇಷ ಪೂಜೆಯೊಂದಿಗೆ ತೆರಳಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಮಲಿಂಗೇಶ್ವರ ದೇವಾಲಯದ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಕಾರ್ಯದರ್ಶಿ ಮಾಧವ್ ಸೇರಿದಂತೆ ಅಖಿಲ ಭಾರತ ಸನ್ಯಾಸಿ ಸಂಘದ ಸದಸ್ಯರು ಹಾಜರಿದ್ದರು. ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸ ಆಚಾರ್ ನವರಿಂದ ಕಾವೇರಿ ನದಿ ಪೂಜೆ ಸೇರಿದಂತೆ ಶ್ರೀ ರಾಮಲಿಂಗೇಶ್ವರ ದೇವರಿಗೂ ಪೂಜಾ ಕೈಂಕರ್ಯಗಳು ನಡೆದವು.