ಮಡಿಕೇರಿ, ಅ. ೨೩: ೨೦೨೨-೨೩ನೇ ಸಾಲಿನಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಬೆಳೆಗಳು ಶೇ. ೩೩ ಕ್ಕಿಂತ ಅಧಿಕ ಹಾನಿಯಾಗಿರುವ ಬಗ್ಗೆ ವರದಿ ಸಲ್ಲಿಕೆಯಾಗಿದೆ. ಮಳೆ-ಗಾಳಿಯಿಂದ ಹಾನಿಯಾದ ಪ್ರದೇಶಗಳನ್ನು ತೋಟಗಾರಿಕೆ ಮತ್ತು ಕಾಫಿ ಮಂಡಳಿಯವರು ಜಂಟಿಯಾಗಿ ಸಮೀಕ್ಷೆ ನಡೆಸಿದ್ದಾರೆ. ಇದೀಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶೇ. ೩೩ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿರುವುದಾಗಿ ಉಲ್ಲೇಖಿಸಿ ವರದಿ ಸಲ್ಲಿಸಲಾಗಿದೆ.
ಈ ವರದಿಯನ್ನು ಆಧರಿಸಿ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಬೆಳೆ ಹಾನಿಗೆ ಒಳಪಟ್ಟ ತಾಲೂಕು, ಹೋಬಳಿಗಳನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಮಡಿಕೇರಿ ತಾಲೂಕಿನ ಮಡಿಕೇರಿ, ಸಂಪಾಜೆ, ನಾಪೋಕ್ಲು, ಭಾಗಮಂಡಲ ಹೋಬಳಿಯ ಎಲ್ಲಾ ಗ್ರಾಮಗಳು.
(ಮೊದಲ ಪುಟದಿಂದ) ಸೋಮವಾರಪೇಟೆ ತಾಲೂಕಿನ ಸೋಮವಾರಪೇಟೆ, ಶಾಂತಳ್ಳಿ, ಕೊಡ್ಲಿಪೇಟೆ, ಶನಿವಾರಸಂತೆ ಹೋಬಳಿಯ ಎಲ್ಲಾ ಗ್ರಾಮಗಳು ಸೇರಿವೆ. ಕುಶಾಲನಗರ ತಾಲೂಕಿನ ಕುಶಾಲನಗರ, ಸುಂಟಿಕೊಪ್ಪ ಹೋಬಳಿಯ ಎಲ್ಲಾ ಗ್ರಾಮಗಳು.
ವೀರಾಜಪೇಟೆ ತಾಲೂಕಿನ ವೀರಾಜಪೇಟೆ, ಅಮ್ಮತ್ತಿ ಹೋಬಳಿಯ ಎಲ್ಲಾ ಗ್ರಾಮಗಳು ಹಾಗೂ ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ, ಬಾಳೆಲೆ, ಹುದಿಕೇರಿ, ಶ್ರೀಮಂಗಲ ಹೋಬಳಿಯ ಎಲ್ಲಾ ಗ್ರಾಮಗಳು ಶೇ. ೩೩ ಕ್ಕಿಂತ ಬೆಳೆ ಹಾನಿಯಾಗಿರುವ ಪ್ರದೇಶಗಳೆಂದು ಉಲ್ಲೇಖಿಸಲಾಗಿದೆ.