ಮಡಿಕೇರಿ, ಅ. ೨೫: ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬAಧ ಮಣ್ಣು ಸಂಗ್ರಹಣೆ ಪ್ರಯುಕ್ತ ತಾ. ೨೭ ಮತ್ತು ೨೮ ರಂದು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪವಿತ್ರ ಮೃತ್ತಿಕೆ ಸಂಗ್ರಹಣೆ ಮಾಡಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ತಿಳಿಸಿದ್ದಾರೆ.

ತಾ. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ರಿಂದ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಣೆಗೆ ಚಾಲನೆ ದೊರೆಯಲಿದೆ.

ಬಳಿಕ ಗಾಳಿಬೀಡು, ಕೆ.ನಿಡುಗಣೆ, ಮೇಕೇರಿ, ಹಾಕತ್ತೂರು, ಹೊಸ್ಕೇರಿ, ಮರಗೋಡು, ಕಾಂತೂರು ಮೂರ್ನಾಡು, ಹೊದ್ದೂರು, ನಾಪೋಕ್ಲು, ಕೊಣಂಜಗೇರಿ, ನರಿಯಂದಡ, ಕಕ್ಕಬ್ಬೆ, ಎಮ್ಮೆಮಾಡು, ಬಲ್ಲಮಾವಟಿ, ಅಯ್ಯಂಗೆರಿ. ಹಾಗೆಯೇ ತಾ. ೨೮ ರಂದು ಬೆಟ್ಟಗೇರಿ, ಬೇಂಗೂರು, ಕುಂದಚೇರಿ, ಭಾಗಮಂಡಲ, ಕರಿಕೆ, ಪೆರಾಜೆ, ಚೆಂಬು, ಸಂಪಾಜೆ, ಮದೆ, ಕಡಗದಾಳು, ಮಕ್ಕಂದೂರು ಗ್ರಾಮ ಪಂಚಾಯಿತಿಗಳಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಮಾಹಿತಿ ನೀಡಿದ್ದಾರೆ.

ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬAಧ ಪವಿತ್ರ ಮೃತ್ತಿಕೆ ಸಂಗ್ರಹಣೆ ಪ್ರಯುಕ್ತ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ತಹಶೀಲ್ದಾರ್ ಮಹೇಶ್, ಪ್ರಕಾಶ್, ನರಗುಂದ, ತಾ.ಪಂ. ಇಒ ಜಯಣ್ಣ ಇತರರು ಇದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಆಡಳಿತ ಮಂಡಳಿ ಹಾಗೂ ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿ ಕಾರ್ಯಕ್ರಮದ ಯಶಸ್ಸಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ತಿಳಿಸಿದ್ದಾರೆ.