ಮಡಿಕೇರಿ, ಅ. ೨೪: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಮತ್ತು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಮಡಿಕೇರಿ ಅರಣ್ಯ ವಿಭಾಗ ಸಹಯೋಗದಲ್ಲಿ ಜೀವ ವೈವಿಧ್ಯದ ಸಂರಕ್ಷಣೆ, ಸುಸ್ಥಿರ ಬಳಕೆ ಮತ್ತು ಔಷಧಿ ಸಸ್ಯ ಸಂಪತ್ತಿನ ಕುರಿತು ಮಾಹಿತಿ ಕಾರ್ಯಾಗಾರ ತಾ. ೨೮ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ನಡೆಯಲಿರುವ ಕಾರ್ಯಕ್ರಮವನ್ನು ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಎಸ್ಪಿ ಕ್ಯಾ. ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎ. ಸುದರ್ಶನ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತ ಎಸ್. ಅರೇಕಲ್, ಕೊಡಗು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ ಪಾಲ್ಗೊಳ್ಳಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ವಿಚಾರಗೋಷ್ಠಿ ನಡೆಯಲಿದೆ. ಔಷಧಿ ಸಸ್ಯಗಳ ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಟ್ರೀಲ್ಯಾಂಡ್ಸ್ ಫೌಂಡೇಷನ್‌ನ ಕೆ.ಎನ್. ಮೂರ್ತಿ, ಯಶಸ್ವಿ ಕೃಷಿ ಅರಣ್ಯ ನೆಡುತೋಪು ಮಾದರಿ ಬಗ್ಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ವಿ. ಮಹೇಶ್ವರಪ್ಪ, ಕೊಡಗಿನ ಔಷಧಿ ಸಸ್ಯ ಸಂಪತ್ತು ಮತ್ತು ಅವುಗಳ ಕೃಷಿ ವಿಚಾರವಾಗಿ ಔಷಧಿ ಸಸ್ಯ ಸಲಹೆಗಾರ ಡಾ. ಎಂ.ಜೆ. ಪ್ರಭು ವಿಷಯ ಮಂಡನೆ ಮಾಡಲಿದ್ದಾರೆ.
ಕೃಷಿ ಅರಣ್ಯ ಮತ್ತು ಜೀವ ವೈವಿಧ್ಯ ಕ್ಷೇತ್ರದಲ್ಲಿ ಸಾಧನೆ ತೋರಿದವರ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಸಿ.ಜಿ. ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅರಣ್ಯ ಮಹಾ ವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಬಿ.ಎನ್. ಸತೀಶ್, ಪ್ರಗತಿಪರ ಕೃಷಿಕರಾದ ನಾಪಂಡ ಪೂಣಚ್ಚ, ಮಂದ್ರೀರ ತೇಜಸ್ ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ಬಳಿಕ ಅತಿಥಿಗಳೊಂದಿಗೆ ಸಂವಾದ ನೆರವೇರಲಿದೆ.
ಸಂಜೆ ೩.೩೦ಕ್ಕೆ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಜಿ.ಎ. ಸುದರ್ಶನ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತ ಎಸ್. ಅರೇಕಲ್, ಡಿಸಿಎಫ್ ಎ.ಟಿ. ಪೂವಯ್ಯ, ಪೊನ್ನಂಪೇಟೆ ಅರಣ್ಯ ಕಾಲೇಜಿನ ಡೀನ್ ಡಾ. ಸಿ.ಜಿ. ಕುಶಾಲಪ್ಪ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.