ಮಡಿಕೇರಿ, ಅ. ೨೫: ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮಡಿಕೇರಿ ಶಕ್ತಿಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡಿದರು. ಈ ಸಂದರ್ಭ ವೃದ್ಧಾಶ್ರಮದ ಹಿರಿಯರಿಗೆ ಸಂಸ್ಥೆಯ ವತಿಯಿಂದ ಆರ್ಥಿಕ ನೆರವು ಹಾಗೂ ಅಗತ್ಯ ವಸ್ತುಗಳಾದ ದಿನಸಿ, ಹಣ್ಣು-ಹಂಪಲು, ಬಟ್ಟೆಯನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ನೃತ್ಯದ ಮೂಲಕ ಅಲ್ಲಿನ ಹಿರಿಯರನ್ನು ಮನರಂಜಿಸಿ ದರು.

ಹಿರಿಯರಿಂದ ಮಕ್ಕಳು ತಮ್ಮ ತಂದೆ-ತಾಯಿಯರನ್ನು ಅವರ ಮುಪ್ಪಿನ ಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳಬೇಕೆಂಬ ನೈತಿಕ ಶಿಕ್ಷಣವನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.