ಕೂಡಿಗೆ, ಅ. ೨೪: ಇಲ್ಲಿಗೆ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರು ನಿರ್ವಾಹಕರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ನೀರು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ಒಂದು ದಿನದ ಎಫ್‌ಟಿಕೆ ಕಿಟ್ ಬಳಸುವ ಮೂಲಕ ನೀರಿನ ಗುಣಮಟ್ಟ ಪರೀಕ್ಷಿಸುವ ಬಗ್ಗೆ ತರಬೇತಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೀಡಲಾಯಿತು.

ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳು, ಅಂಗನವಾಡಿ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಗುಣಮಟ್ಟ ಈ ಸಂದರ್ಭದಲ್ಲಿ ಪರಿಶೀಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ. ಚೆಲುವರಾಜು, ಉಪಾಧ್ಯಕ್ಷೆ ಜಯಮ್ಮ, ಅಭಿವೃದ್ಧಿ ಅಧಿಕಾರಿ ಸುಮೇಶ್ ಸೇರಿದಂತೆ ಸರ್ವ ಸದಸ್ಯರುಗಳು ಇದ್ದರು.