ಮಡಿಕೇರಿ, ಅ. ೨೪: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯ ವತಿಯಿಂದ ದ್ವಿತೀಯ ದರ್ಜೆ ಸಹಾಯಕರು ‘ಸಿ’ ವೃಂದದ ಒಟ್ಟು ೧೩ ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ನವೆಂಬರ್, ೦೭ ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.೫೮, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-೫೬೦೦೨೫, ಇವರಿಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.