ಶನಿವಾರಸಂತೆ, ಅ. ೨೪: ಇಲ್ಲಿನ ಸುಪ್ರಜಾ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಹಬ್ಬದ ಪ್ರಯುಕ್ತ ಪ್ರಿ-ಕೆ.ಜಿ.ಯಿಂದ ೧೦ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹತ್ತಿಯಿಂದ ಬತ್ತಿ ತಯಾರಿಸಿ, ದೀಪ ಬೆಳಗಿಸುವ ಬಗ್ಗೆ ತಿಳಿಸಿ ಪರಿಸರ ಸಂರಕ್ಷಣೆಯ ಕಾಳಜಿ ಮೂಡಿಸಲಾಯಿತು. ಈ ಸಂದರ್ಭ ಪ್ರಾಂಶುಪಾಲೆ ಡಿ. ಸುಜಲಾದೇವಿ, ಶಿಕ್ಷಕರು ಹಾಜರಿದ್ದರು.ಮುಳ್ಳೂರು: ಸಮೀಪದ ನಿಡ್ತ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಿದರು. ಪಟಾಕಿ ಸಿಡಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಪರಿಸರ ಸ್ನೇಹಿ ದೀಪಾವಳಿ ಆಚರಣೆ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ‘ಹಣತೆ ಹಚ್ಚೋಣ, ಪಟಾಕಿ ತ್ಯಜಿಸೋಣ, ಪರಿಸರ ಉಳಿಸೋಣ’ ಎಂಬ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಸಂಕಲ್ಪ ಮಾಡಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕೊಠಡಿಯಲ್ಲಿ ಕತ್ತಲು ಸೃಷ್ಟಿಸಿ ಹಣತೆ ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿದರು. ಈ ಸಂದರ್ಭ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಎಂ.ವಿ.ರೂಪ, ಪ್ರಿಯಾಂಕ ಚಿಪಳೊಣಕರ್, ಡಿ.ಎಂ.ಮಹಾದೇವಿ, ಎಚ್.ವಿ.ಅಭಿಷೇಕ್ ಹಾಜರಿದ್ದರು.ಶನಿವಾರಸಂತೆ: ಶನಿವಾರಸಂತೆಯ ಬ್ರೆöÊಟ್ ಅಕಾಡೆಮಿ ವಿದ್ಯಾಸಂಸ್ಥೆಯಲ್ಲಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸಿ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಹೇಮಾಪರಮೇಶ್, ಮುಖ್ಯ ಶಿಕ್ಷಕಿ ಟಿ.ಎನ್. ಚೈತ್ರಾ, ಶಿಕ್ಷಕಿಯರಾದ ಮಾನನಾ, ಮನಸ್ವಿ, ತೇಜಾವತಿ, ತಾರಾ, ರೂಪವತಿ, ಶ್ವೇತಾ ಹಾಜರಿದ್ದರು.

*ಶನಿವಾರಸಂತೆಯ ಭಾರತಿ ವಿದ್ಯಾಸಂಸ್ಥೆ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ನೇಸರ ಇಕೋ ಕ್ಲಬ್ ವತಿಯಿಂದ ಶಿಕ್ಷಕಿ ಎಚ್.ಎನ್. ಮಂಗಳಾ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸಿದರು. ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಶಿಕ್ಷಕರು ಹಾಜರಿದ್ದರು.ಕುಶಾಲನಗರ: ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ನಡೆಯಿತು. ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯು ಮಾಲಿನ್ಯ ಮತ್ತು ದುರಂತ ಸಂಭವಿಸುವುದನ್ನು ತಡೆಗಟ್ಟಲು ಇಂತಹ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ವಿವರಿಸಿದ ಉಪ ಪ್ರಾಂಶುಪಾಲ ಬಾಲಕೃಷ್ಣ, ಮಾಲಿನ್ಯಕಾರಿ ಹಾಗೂ ಅಪಾಯಕಾರಿ ಪಟಾಕಿ ಸಿಡಿಸುವುದರಿಂದ ವಿಷಕಾರಿ ಅನಿಲ ಬಿಡುಗಡೆಗೊಂಡು ಮನುಷ್ಯ ಸೇರಿದಂತೆ ಪ್ರಾಣಿÀ ಸಂಕುಲಕ್ಕೆ ತೀವ್ರ ತೊಂದರೆಯಾಗಲಿದೆ. ಈ ದಿಸೆಯಲ್ಲಿ ಮಕ್ಕಳು ಮಾಲಿನ್ಯ ಮುಕ್ತ ಹಸಿರು ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದರು.

ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಎಚ್. ಎನ್.ಜಯಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಗೃತಿ ಅಭಿಯಾನ ನಂತರ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಣತೆ ಹಚ್ಚೋಣ, ಹಸಿರು ದೀಪಾವಳಿ ಆಚರಿಸೋಣ, ಮಾಲಿನ್ಯಕಾರಿ ಪಟಾಕಿ ತ್ಯಜಿಸೋಣ ಮಾಲಿನ್ಯ ತಡೆಯೋಣ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದ ವಿದ್ಯಾರ್ಥಿಗಳು ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು.ಮಡಿಕೇರಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಾಪೋಕ್ಲುವಿನ ಪ್ರೌಢಶಾಲಾ ವಿಭಾಗದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಎಸ್.ಎಸ್. ಘಟಕ, ಇಕೋ ಕ್ಲಬ್ ಮತ್ತು ರೋಟರಿಯ ಇಂರ‍್ಯಾಕ್ಟ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಹಸಿರು ದೀಪಾವಳಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿ ಪ್ರತಿಜ್ಞೆ ವಿಧಿ ಬೋಧಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲ ಶಿವಣ್ಣ, ಎನ್.ಎಸ್.ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇಂರ‍್ಯಾಕ್ಟ್ ಕ್ಲಬ್‌ನ ಕಾರ್ಯಕ್ರಮ ಅಧಿಕಾರಿ ಉಷಾರಾಣಿ, ಇಕೋ ಕ್ಲಬ್‌ನ ಸಂಯೋಜಕ ಮಾದೇಶ್, ಶಿಕ್ಷಕರಾದ ನಂದಿತಾ, ಗಂಗಮ್ಮ, ಬಂಡೆಪ್ಪ ಕೊಟಾಲೆ, ಸುಮಿತ್ರ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಹಾಜರಿದ್ದರು.