ಸೋಮವಾರಪೇಟೆ, ಅ.೨೪: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶುಂಠಿ ಗ್ರಾಮದಲ್ಲಿ ಗ್ರಾಮ ಒನ್ ಕೇಂದ್ರ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು.

ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಬಿ. ಭರತ್‌ಕುಮಾರ್ ಅವರು ಭಾಗವಹಿಸಿ ಆರೋಗ್ಯ ಕಾರ್ಡ್ನ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಗೌಡಳ್ಳಿ ಗ್ರಾಮ ಒನ್ ಕೇಂದ್ರದ ಸಹಾಯಕಿ ಕಾವ್ಯ ಅವರಿಗೆ ಪ್ರೋತ್ಸಾಹ ಧನ ವಿತರಿಸಿದರು. ಕಾರ್ಯಕ್ರಮದಲ್ಲಿ ಶುಂಠಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಿ ಹೆಲ್ತ್ ಕಾರ್ಡ್ ಯೋಜನೆಗೆ ಹೆಸರು ನೋಂದಾಯಿಸಿಕೊAಡರು.