*ಗೋಣಿಕೊಪ್ಪ, ಅ. ೨೫: ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಚಿತ್ರ ಬಿಡಿಸುವ ಸ್ಪರ್ಧೆಗೆ ಪೋನ್ನಂಪೇಟೆ-ವೀರಾಜಪೇಟೆ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ರಾಜೇಶ್ ಚಾಲನೆ ನೀಡಿದರು.

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಅವರಣದಲ್ಲಿ ತಾಲೂಕು ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ ಶುಕ್ರವಾರ ನಡೆದ ೧ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.

ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ದಶಮಿ ಸದಾ, ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಕೆ. ಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಗುರುರಾಜ್, ಸಹಾಯಕ ಶಿಶು ಅಭಿವೃದ್ದಿ ಅಧಿಕಾರಿ ರೀತಾ, ಮುಖ್ಯ ಶಿಕ್ಷಕ ವಿಜಯ್, ಚಿತ್ರಕಲಾ ಶಿಕ್ಷಕ ಸತೀಶ್, ಸಹಶಿಕ್ಷಕರುಗಳಾದ ಮಹೇಶ್, ನೇತ್ರಾವತಿ, ತಂಗಮ್ಮ ಹಾಗೂ ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು.