ಕುಶಾಲನಗರ, ಅ. ೨೫: ಕುಶಾಲನಗರ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು. ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಪಟಾಕಿ ಸಿಡಿಸುವುದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಹಸಿರು ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಶಿಕ್ಷಕ ಎಂ.ಹೆಚ್. ಪ್ರಸಾದ್ ಮಾತನಾಡಿ, ಮಣ್ಣಿನ ಹಣತೆಯನ್ನು ಬೆಳಗಿಸುವ ಮೂಲಕ ಮಾಲಿನ್ಯ ಮುಕ್ತ ಹಸಿರು ದೀಪಾವಳಿ ಆಚರಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸೈನಿಕ ಶಾಲೆ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್, ಉಪ ಪ್ರಾಂಶುಪಾಲ ಸ್ಕಾ÷್ವಡ್ರನ್ ಲೀಡರ್ ಮನ್ ಪ್ರೀತ್ ಸಿಂಗ್, ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಅಜಿತ್ ಸಿಂಗ್, ಶಿಕ್ಷಕ ಜಿ.ಕೆ. ಮಂಜಪ್ಪ, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಗೃತಿ ಆಂದೋಲನದಲ್ಲಿ ಪರಿಸರ ಪ್ರತಿಜ್ಞಾ ವಿಧಿ ಸ್ವಿಕರಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಸಂಕಲ್ಪ ಮಾಡಿದರು. ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಸುಮಾರು ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಸೋಮವಾರಪೇಟೆ: ತಾಲೂಕಿನ ಗಣಗೂರು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭುವಿ ಇಕೋ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸದಂತೆ ಹಾಗೂ ಹಸಿರು ದೀಪಾವಳಿ ಆಚರಿಸುವಂತೆ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲಾಯಿತು. ಶಾಲಾ ಶಿಕ್ಷಕರಾದ ರಮೇಶ್ ಅವರು ಮಕ್ಕಳಿಂದ ಶಾಲೆಯ ಆವರಣದಲ್ಲಿ ದೀಪ ಹಚ್ಚಿಸುವ ಮೂಲಕ ಮಕ್ಕಳಿಗೆ ಪಟಾಕಿ ಸಿಡಿಸಿ ಶಬ್ದ ಹಾಗೂ ಪರಿಸರ ಮಾಲಿನ್ಯ ಮಾಡದಂತೆ ತಿಳಿ ಹೇಳಿದರು. ಮುಖ್ಯ ಶಿಕ್ಷಕಿ ಮೋಹಿನಿ, ಸಹಶಿಕ್ಷಕರಾದ ದೇವರಾಜು ಇದ್ದರು.ಕೂಡಿಗೆ: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ದೀಪಾವಳಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲಾವರಣದಲ್ಲಿ ರಂಗೋಲಿಯ ಚಿತ್ತಾರದೊಂದಿಗೆ ಮಣ್ಣಿನ ದೀಪ (ಹಣತೆ) ಗಳನ್ನು ಬೆಳಗಿಸಿ ದೀಪಾವಳಿ ಸಂಭ್ರಮಿಸಿದರು.

ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಪಟಾಕಿ ಸಿಡಿಸುವುದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ ಮಾತನಾಡಿದರು.

ಶಿಕ್ಷಕಿಯರಾದ ಭಾರತಿ, ಭೋಜಮ್ಮ, ಉಷಾ, ಗೀತಾ ರಾಣಿ, ರಶ್ಮಿ ಇದ್ದರು. ಆಂದೋಲನದಲ್ಲಿ ಶಿಕ್ಷಕರು ಹಾಗೂ ಮಕ್ಕಳು ಜತೆಗೂಡಿ ಪರಿಸರ ಪ್ರತಿಜ್ಞಾ ವಿಧಿ ಸ್ವಿಕರಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಸಂಕಲ್ಪ ಮಾಡಿದರು.

ಆಂದೋಲನದಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತ ಭಿತ್ತಿಪತ್ರಗಳನ್ನು ಹಿಡಿದು ಹಸಿರು ದೀಪಾವಳಿ ಆಚರಣೆ ಬಗ್ಗೆ ಪರಿಸರ ಜಾಗೃತಿ ನಡೆಸಿದರು.