ಮಡಿಕೇರಿ, ಅ. ೨೫: ವಿವಿಧೆಡೆ ಗ್ರಾ.ಪಂ. ಉಪಚುನಾವಣೆ ಹಿನ್ನೆಲೆ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಸಂಬAಧ ಮತ್ತು ಸದರಿ ಅವಧಿಯಲ್ಲಿ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕೆಲವೊಂದು ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.

ಉಪ ಚುನಾವಣೆ ನಡೆಯುವ ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ, ಬಿಳುಗುಂದ, ಮಾಲ್ದಾರೆ, ಸೋಮವಾರಪೇಟೆ ತಾಲೂಕಿನ ನಿಡ್ತ, ದೊಡ್ಡಮಳ್ತೆ, ಕುಶಾಲನಗರ ತಾಲೂಕಿನ ಕೊಡಗರಹಳ್ಳಿ, ಮಡಿಕೇರಿ ತಾಲೂಕಿನ ಪೆರಾಜೆ ಗ್ರಾ.ಪಂ. ವ್ಯಾಪ್ತಿಗಳಲ್ಲಿ ತಾ. ೨೬ರ ಸಂಜೆ ೫ ಗಂಟೆಯಿAದ ತಾ. ೨೮ರ ಮಧ್ಯರಾತ್ರಿ ೧೨ ಗಂಟೆವರೆಗೆ ಕೆಲ ನಿರ್ಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಅಭ್ಯರ್ಥಿ ಅಥವಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಗ್ರಾ.ಪಂ. ಚುನಾವಣೆಗೆ ಸಂಬAಧಿಸಿದAತೆ ಯಾವುದೇ ಸಭೆ-ಸಮಾರಂಭ ನಡೆಸುವುದು, ಮೆರವಣಿಗೆ ಇನ್ನಿತರ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದನ್ನು ನಿಷೇಧಿಸಿದೆ.

ಅಭ್ಯರ್ಥಿ ಅಥವಾ ಕಾರ್ಯಕರ್ತರು ಮತದಾರರನ್ನು ಮತಗಟ್ಟೆಗೆ ವಾಹನದಲ್ಲಿ ಕರೆತರುವುದು ಹಾಗೂ ಅಲ್ಲಿಂದ ಕರೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಎಲ್ಲಾ ಮತಗಟ್ಟೆಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆಯ ೧೦೦ ಮೀಟರ್ ವ್ಯಾಪ್ತಿಯಲ್ಲಿ ಅಭ್ಯರ್ಥಿ ಪರ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ.

ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಫಲಿತಾಂಶ ಘೋಷಣೆಯಾಗುವವರೆಗೆ ಯಾರೇ ವ್ಯಕ್ತಿ ಸಾರ್ವಜನಿಕವಾಗಿ ಬಂದೂಕು, ರಿವಾಲ್ವರ್‌ಗಳನ್ನು ಹಿಡಿದುಕೊಂಡು ಓಡಾಡುವುದು, ಪ್ರದರ್ಶಿಸುವುದನ್ನು ನಿಷೇಧಿಸಿದ್ದಾರೆ.