ಸೋಮವಾರಪೇಟೆ, ಅ .೨೭ : ಕೋಟಿ ಕಂಠ ಗಾಯನ ಕಾರ್ಯಕ್ರಮದ ಅಂಗವಾಗಿ ತಾ. ೨೮ರಂದು (ಇಂದು) ಪಟ್ಟಣದಲ್ಲಿ ಎರಡು ಸಾವಿರ ಮಂದಿಯಿAದ ಗಾಯನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್ ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೆಳಿಗ್ಗೆ ೧೦.೩೦ಕ್ಕೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ‘ಕನ್ನಡಕ್ಕಾಗಿ ನಾವು, ಮಾತಾಡ್ ಮಾತಾಡ್ ಕನ್ನಡ, ನನ್ನ ನಾಡು ನನ್ನ ಹಾಡು, ಕನ್ನಡ ರಾಜ್ಯೋತ್ಸವ ಕೋಟಿ ಕಂಠ ಗಾಯನ ಅಭಿಯಾನದ’ ಅಂಗವಾಗಿ ಎರಡು ಸಾವಿರ ಮಂದಿ ಗಾಯನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.