ಮಡಿಕೇರಿ, ಅ. ೨೭ : ೬೭ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಕೋಟಿ ಕಂಠ ಗಾಯನಕ್ಕೆ’ ಜಿಲ್ಲಾಡಳಿತ ವತಿಯಿಂದ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಅಗತ್ಯ ಸಿದ್ಧ್ದತೆ ಮಾಡಿಕೊಳ್ಳಲಾಗಿದೆ.
ತಾ. ೨೮ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ಜಿಲ್ಲಾ ಕೇಂದ್ರ ಮಡಿಕೇರಿಯ ರಾಜಾಸೀಟಿನಲ್ಲಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಇತರರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
‘ನನ್ನ ನಾಡು-ನನ್ನ ಹಾಡು’ ಹೆಸರಿನಲ್ಲಿ ಜಿಲ್ಲೆಯಾದ್ಯಂತ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ವತಿಯಿಂದ ಅತ್ಯಂತ ವಿಶಿಷ್ಟವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಈಗಾಗಲೇ ನೋಂದಣಿ ಕಾರ್ಯವು ನಡೆದಿದ್ದು, ಸಾರ್ವಜನಿಕರು ಕೋಟಿ ಕಂಠ ಗೀತ ಗಾಯನಕ್ಕೆ ಆನ್‌ಲೈನ್ hಣಣಠಿs://ಞಚಿಟಿಟಿಚಿಜಚಿsiಡಿi.ಞಚಿಡಿಟಿಚಿಣಚಿಞಚಿ.gov.iಟಿ/ಞಞg/ಠಿubಟiಛಿ/ ನಲ್ಲಿ ನೋಂದಣಿ ಮಾಡಬಹುದಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ೨೦ ಸಾವಿರ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ೧೦ ಸಾವಿರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ೧೮೦೦, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ೧,೨೭೦ ವಿದ್ಯಾರ್ಥಿಗಳು ಹಾಗೂ ನೌಕರರು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ೧,೦೫೦ ಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ವತಿಯಿಂದ ೧,೫೦೦ ಕ್ಕೂ ಹೆಚ್ಚು ಮಂದಿ, ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ೭೦೦, ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ೩೦೦ ಕ್ಕೂ ಹೆಚ್ಚು ಮಂದಿ, ಹಾಗೆಯೇ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಕ್ರೀಡಾ ವಸತಿ ಶಾಲೆಗಳು, ಎಂಜಿನಿಯರಿAಗ್ ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನೋಂದಣಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು ೨೦ ರಿಂದ ೨೫ ಕಡೆಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಜರುಗಲಿದೆ.
ರಾಷ್ಟçಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯಾದ ‘ಜಯ ಭಾರತ ಜನನಿಯ ತನುಜಾತೆ’, ಹುಯಿಲಗೋಳ ನಾರಾಯಣರಾಯರು ರಚಿಸಿರುವ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಕುವೆಂಪು ಅವರು ಬರೆದಿರುವ ‘ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್.ಕರ್ಕಿ ಅವರು ಬರೆದಿರುವ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ.ಚೆನ್ನವೀರ ಕಣವಿ ಅವರು ಬರೆದಿರುವ ‘ವಿಶ್ವ ವಿನೂತನ ವಿದ್ಯಾಚೇತನ’, ಡಾ.ಹಂಸಲೇಖ ಅವರು ಬರೆದಿರುವ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಹಾಡುಗಳನ್ನು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಹಾಡಲಾಗುತ್ತದೆ. ತಾಲೂಕು ಮಟ್ಟದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಜರುಗಲಿದೆ. ಸೋಮವಾರಪೇಟೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ತಾಲೂಕು ಆಡಳಿತ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ.