ಮಡಿಕೇರಿ, ಅ. ೨೮: ಕನ್ನಡ ನಾಡು ನುಡಿಯನ್ನು ಪ್ರೀತಿಸಿ ಗೌರವಿಸುವುದರ ಜೊತೆಗೆ ಪ್ರತಿಯೊಬ್ಬರಲ್ಲೂ ಕನ್ನಡಾಭಿಮಾನವನ್ನು ಮೂಡಿಸುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸರ್ಕಾರ ಹಮ್ಮಿಕೊಂಡಿರುವ ‘ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆ ಧ್ವನಿಗೂಡಿಸಿತು. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ವೀರಾಜಪೇಟೆ, ಸೋಮವಾರಪೇಟೆ ಮತ್ತಿತರ ಕಡೆಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದ ಮೂಲಕ ಕನ್ನಡಪರ ಗೀತೆಗಳು ಮಾರ್ದನಿಸಿದವು.

(ಮೊದಲ ಪುಟದಿಂದ) ಮಡಿಕೇರಿಯ ರಾಜಾಸೀಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಜಾನಪದ ಪರಿಷತ್, ಕೊಡವ ಸಾಹಿತ್ಯ ಅಕಾಡೆಮಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ರೋಟರಿ ಮಡಿಕೇರಿ ವುಡ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿವಿಧ ಮಹಿಳಾ ಒಕ್ಕೂಟಗಳು, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ನಡೆಯಿತು. ಮೈಸೂರಿನ ಗಾಯಕರ ತಂಡ ಪ್ರಸ್ತುತಪಡಿಸಿದ ಕನ್ನಡ ನಾಡು ನುಡಿ ಕುರಿತಾದ ಗೀತೆಗಳಿಗೆ ವಿವಿಧ ಶಾಲಾ-ಕಾಲೇಜು ಮಕ್ಕಳು ಸೇರಿದಂತೆ ನೆರೆದಿದ್ದವರೆಲ್ಲಾ ಧನಿಗೂಡಿಸಿದರು. ಕುವೆಂಪು ಅವರು ಬರೆದ ಜೈ ಭಾರತ ಜನನಿಯ ತನುಜಾತೆ.., ಹುಯಿಲಗೋಳ ನಾರಾಯಣ ರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು..., ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ..., ಡಾ. ಕರ್ಕಿ ಅವರು ಬರೆದ ಹಚ್ಚೇವು ಕನ್ನಡದ ದೀಪ..., ಚನ್ನವೀರಕಣವಿ ಅವರು ಬರೆದ ವಿಶ್ವವಿನೂತನ, ಡಾ. ಹಂಸಲೇಖ ಅವರು ಬರೆದ ಹುಟ್ಟಿದರೆ ಕನ್ನಡÀ ನಾಡಲ್ಲಿ ಹುಟ್ಟಬೇಕು ಗೀತೆಗಳು ಎಲ್ಲೆಡೆ ಮೊಳಗಿದವು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಕನ್ನಡ ಭಾಷೆಯ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳಸಿಕೊಳ್ಳಬೇಕು. ಗಡಿ ಭಾಗದಲ್ಲಿ ಕನ್ನಡ ಭಾಷೆ ಸಂಬAಧ ಸಮಸ್ಯೆಗಳಿವೆ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಹಾಗೆಂದು ಇತರ ಭಾಷೆಗಳನ್ನು ನಾವು ಧ್ವೇಷಿಸುವುದಿಲ್ಲ, ಕನ್ನಡವನ್ನು ಎಲ್ಲರೂ ಗೌರವಿಸಬೇಕು. ಇದಕ್ಕೆ ಯಾರಾದರೂ ವ್ಯತಿರಿಕ್ತವಾಗಿ ನಡೆದುಕೊಂಡರೆ ಕಾನೂನು ಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಬೋಪಯ್ಯ ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಜಿ.ಪಂ. ಸಿಇಓ ಡಾ. ಆಕಾಶ್, ಎಸ್ಪಿ ಎಂ.ಎ. ಅಯ್ಯಪ್ಪ, ತಹಶೀಲ್ದಾರ್ ಮಹೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ನಗರಸಭಾ ಆಯುಕ್ತ ವಿಜಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ. ಅನಂತ ಶಯನ, ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಸಂಪತ್‌ಕುಮಾರ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಡಾ. ಸದಾಶಿವ ಪಲ್ಲೇದ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಉ.ರಾ. ನಾಗೇಶ್ ನಿರೂಪಿಸಿ, ಕನ್ನಡ ಸಂಸ್ಕೃತಿ ಇಲಾಖೆಯ ಪ್ರಬಾರ ಉಪನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.

ಸೋಮವಾರಪೇಟೆ : ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜನೆಗೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವು, ಕನ್ನಡದ ಸಂಗೀತ ಸುಧೆಯನ್ನು ಪಸರಿಸಿತು.

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಒಳಗೊಂಡAತೆ ಸಾವಿರಾರು ಮಂದಿ ಗೀತೆಗಾಯನದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ "ಕನ್ನಡಕ್ಕಾಗಿ ನಾವು, ಮಾತಾಡ್ ಮಾತಾಡ್ ಕನ್ನಡ, ನನ್ನ ನಾಡು ನನ್ನ ಹಾಡು, ಕನ್ನಡ ರಾಜ್ಯೋತ್ಸವ ಕೋಟಿ ಕಂಠ ಗಾಯನ ಅಭಿಯಾನ "ಘೋಷಣೆಯಡಿ ಆಯೋಜಿತವಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರ್ನಾಟಕದಲ್ಲಿ ಕನ್ನಡವೇ ಅಗ್ರಮಾನ್ಯ. ಕನ್ನಡ ನಾಡು, ನುಡಿ, ನೆಲ ಜಲದ ರಕ್ಷಣೆ ಎಲ್ಲರ ಕರ್ತವ್ಯ. ಶಾಸ್ತಿçÃಯ ಭಾಷಾ ಸ್ಥಾನಮಾನ ಹೊಂದಿರುವ ಕನ್ನಡ ಸಾಹಿತ್ಯವು ಅತ್ಯಂತ ಶ್ರೀಮಂತವಾಗಿದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟçಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯಾದ ‘ಜಯ ಭಾರತ ಜನನಿಯ ತನುಜಾತೆ’, ಹುಯಿಲಗೋಳ ನಾರಾಯಣರಾಯರು ರಚಿಸಿರುವ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಕುವೆಂಪು ಅವರು ಬರೆದಿರುವ ‘ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್.ಕರ್ಕಿ ಅವರು ಬರೆದಿರುವ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ.ಚೆನ್ನವೀರ ಕಣವಿ ಅವರು ಬರೆದಿರುವ ‘ವಿಶ್ವ ವಿನೂತನ ವಿದ್ಯಾಚೇತನ’, ಡಾ.ಹಂಸಲೇಖ ಅವರು ಬರೆದಿರುವ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡುಗಳನ್ನು ಹಿನ್ನೆಲೆ ಸಂಗೀತದೊAದಿಗೆ ಸಾಮೂಹಿಕವಾಗಿ ಹಾಡಿ ಕನ್ನಡಾಭಿಮಾನವನ್ನು ಮೆರೆಯಲಾಯಿತು.

ಇದೇ ಸಂದರ್ಭ ಪ್ರತಿಭಾನ್ವಿತ ಕಲಾವಿದರ ತಂಡದಿAದ ಮೂಡಿಬಂದ "ಬೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ.. ನೀನೇ ರಾಜಕುಮಾರ.." ಎಂಬ ಪುನೀತ್ ರಾಜ್ ಕುಮಾರ್ ನಟನೆಯ ಚಿತ್ರದ ಹಾಡು ಎಲ್ಲರ ಗಮನ ಸೆಳೆಯಿತು. ಕಳೆದ ವರ್ಷ ಅಗಲಿದ ಕನ್ನಡದ ಪ್ರತಿಭಾನ್ವಿತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಈ ಹಾಡಿನ ಮೂಲಕ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಹಾಡಿನ ತಾಳಕ್ಕೆ ಕೈಬೀಸಿ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತಾಲೂಕು ದಂಡಾಧಿಕಾರಿ ಎಸ್.ಎನ್.ನರಗುಂದ,ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯ ಎಸ್. ಮಹೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ವಿ. ಸುರೇಶ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಸವರಾಜು, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರದೀಪ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸಾರ್ವಜನಿಕರು ಇದ್ದರು.ವೀರಾಜಪೇಟೆಯಲ್ಲಿ ೬೭ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ‘ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ವೀರಾಜಪೇಟೆ ತಾಲೂಕು ಆಡಳಿತ ವತಿಯಿಂದ ಮಿನಿ ವಿಧಾನ ಸೌಧದ ಎದುರು ವೀರಾಜಪೇಟೆ ತಾಲೂಕು ದಂಡಾಧಿಕಾರಿ ಅರ್ಚನಾ ಭಟ್ ತಾಯಿ ಭುವನೇಶ್ವರಿ ಮಾತೆಗೆ ಪುಷ್ಪನಮನ ಅರ್ಪಿಸುವ ಮೂಲಕ ಗಾಯನಕ್ಕೆ ಚಾಲನೆ ನೀಡಿದರು.

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಗೀತೆಗಳನ್ನು ಹಾಡಲಾಯಿತು.

ಈ ಸಂದರ್ಭ ಪುರಸಭೆಯ ಮುಖ್ಯಾಧಿಕಾರಿ ಚಂದ್ರಕುಮಾರ್, ಪುರಸಭೆ ಅಧ್ಯಕ್ಷೆ ಸುಶ್ಮಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ವನಜಾಕ್ಷಿ, ಗೀತಾಂಜಲಿ, ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವಿಶೇಷ ಆಹ್ವಾನಿತರಾದ ಶಿಕ್ಷಕ ಮಂಜುನಾಥ್, ವೀರಾಜಪೇಟೆ ಕಂದಾಯ ಪರಿವೀಕ್ಷಕ ಮಂಡೇಪAಡ ಹರೀಶ್, ಜಯಪ್ರಕಾಶ್ ನಾರಾಯಣ ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮತ್ತು ಗಾಯಕರಾದ ಲಾಲ್ ಕುಮಾರ್ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪೊನ್ನಂಪೇಟೆ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನದ ಮೇರೆಗೆ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ವಿಶ್ವ ವಿನೂತನ ವಿದ್ಯಾ ಚೇತನ, ಹುಟ್ಟಿದರೇ ಕನ್ನಡ ನಾಡಲ್ ಹುಟ್ಟಬೇಕು, ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ ಗೀತೆಗಳನ್ನು ವಿದ್ಯಾರ್ಥಿಗಳು ಒಕ್ಕೊರಲಿನಿಂದ ಹಾಡುವ ಮೂಲಕ ಕನ್ನಡದ ಕಂಪನ್ನು ಪಸರಿಸಿದರು. ಈ ಸಂದರ್ಭ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ, ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕುಶಾಲನಗರ : ೬೭ ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡ ಕೋಟಿ ಕಂಠ ಗಾಯನ, ಕಾರ್ಯಕ್ರಮ ಅಂಗವಾಗಿ ಕುಶಾಲನಗರದ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಆಯ್ದ ಕನ್ನಡ ಹಾಡುಗಳನ್ನು ಹಾಡಿದರು.

ಕುಶಾಲನಗರ ತಾಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕುಶಾಲನಗರ ಕಾರು ನಿಲ್ದಾಣದಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮತ್ತು ಫಾತಿಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಆಯ್ದ ಕನ್ನಡ ಹಾಡುಗಳನ್ನು ಹಾಡಿದರು.

ಈ ಸಂದರ್ಭ ತಾಲೂಕು ತಹಶೀಲ್ದಾರ್ ಟಿ.ಎಂ ಪ್ರಕಾಶ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಉಪಾಧ್ಯಕ್ಷೆ ಸುರಯ್ಯ ಭಾನು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎಸ್ ಮೂರ್ತಿ, ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಸಂಚಾರ ನಿಯಂತ್ರಕರಾದ ಜಾನ್ ದಾಸ್, ಶ್ಯಾಮ್ ಶೆಟ್ಟಿ, ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಫಿಲಿಪ್ ವಾಸ್ ಮತ್ತಿತರರು ಇದ್ದರು.ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟ ಬೇಕು ಹಾಡಿಗೆ ಮಕ್ಕಳೊಂದಿಗೆ ಶಾಸಕ ರಂಜನ್ ಕುಣಿದು, ಕುಪ್ಪಳಿಸಿದರೆ, ಶಿಕ್ಷಕರು ಸರ್ಕಾರಿ ಅಧಿಕಾರಿಗಳು ಅವರೊಂದಿಗೆ ಹೆಜ್ಜೆಹಾಕಿ ಕನ್ನಡ ಪ್ರೇಮ ಮೆರೆದರು.

ಕಾರ್ಯಕ್ರಮದಲ್ಲಿ ಗೀತಗಾಯನ ತಂಡದೊAದಿಗೆ ಸ. ಪ.ಪೂ. ಕಾಲೇಜು ವಿದ್ಯಾರ್ಥಿಗಳು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು,

ಕುವೆಂಪು ಶಾಲೆ ವಿದ್ಯಾರ್ಥಿಗಳು ಬಾರಿಸು ಕನ್ನಡ ಡಿಂಡಿಮವ, ಸಾಂದೀಪನಿ ಶಾಲೆ ವಿದ್ಯಾರ್ಥಿಗಳು ವಿಶ್ವ ವಿನೂತನ ವಿದ್ಯಾಚೇತನ, ಜ್ಞಾನವಿಕಾಸ ಶಾಲೆ ವಿದ್ಯಾರ್ಥಿಗಳು ಹಚ್ಚೇವು ಕನ್ನಡದ ದೀಪ, ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳು ಜೈ ಭಾರತ ಜನನಿಯ ತನು ಜಾತೆ, ಓ.ಎಲ್.ವಿ. ಶಾಲೆಯ ವಿದ್ಯಾರ್ಥಿಗಳು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಸಂತ ಜೋಸೆಫರ ಪ್ರೌಢಶಾಲೆ ವಿದ್ಯಾರ್ಥಿಗಳು ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳನ್ನು ಹಾಡಿದರು. ನೆರೆದಿದ್ದ ಜನ ಸಮೂಹ ಚಪ್ಪಾಳೆ ಮೂಲಕ ತಮ್ಮ ಹರ್ಷ ವ್ಯಕ್ತಪಡಿಸಿದರು.