ಸೋಮವಾರಪೇಟೆ, ಅ. ೨೭ : ಇಲ್ಲಿನ ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ನ ವತಿಯಿಂದ ರೋಟರಿ ಸದಸ್ಯರಿಗೆ ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟ ಸಮೀಪದ ಯಡೂರು ಸರ್ಕಾರಿ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ತಾ. ೩೦ರಂದು ನಡೆಯಲಿದೆ ಎಂದು ಕ್ರೀಡಾಕೂಟದ ಸಂಚಾಲಕ ಜಿ.ಡಿ. ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಡೆಯುವ ಟೂರ್ನಿಯಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಾಯಕ ಗವರ್ನರ್ಗಳಾದ ಕೆ.ಎಸ್. ತಮ್ಮಯ್ಯ, ಎಸ್.ಕೆ. ಸತೀಶ್, ಅರುಣ್ ಬಿ. ನರಗುಂದ, ಕ್ರೀಡಾ ಸಂಚಾಲಕ ಅಣ್ಣಪ್ಪ ಹಾಗೂ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಚ್.ಸಿ. ಲೋಕೇಶ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.