ನಾಪೋಕ್ಲು, ಅ. ೨೭: ನಾಡಪ್ರಭು ಶ್ರೀ ಕೆಂಪೇಗೌಡರ ೧೦೮ ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಅನಾವರಣಕ್ಕೆ ನಾಪೋಕ್ಲು ಗ್ರಾಮ ಪಂಚಾಯಿತಿಯಿAದ ಪವಿತ್ರ ಮೃತ್ತಿಕೆ ಸಂಗ್ರಹದ ರಥಯಾತ್ರೆಯನ್ನು ಪುಷ್ಪಾರ್ಚನೆಯೊಂದಿಗೆ ಸ್ವಾಗತಿಸಿ ನಾಪೋಕ್ಲು, ಅ. ೨೭: ನಾಡಪ್ರಭು ಶ್ರೀ ಕೆಂಪೇಗೌಡರ ೧೦೮ ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಅನಾವರಣಕ್ಕೆ ನಾಪೋಕ್ಲು ಗ್ರಾಮ ಪಂಚಾಯಿತಿಯಿAದ ಪವಿತ್ರ ಮೃತ್ತಿಕೆ ಸಂಗ್ರಹದ ರಥಯಾತ್ರೆಯನ್ನು ಪುಷ್ಪಾರ್ಚನೆಯೊಂದಿಗೆ ಸ್ವಾಗತಿಸಿ ನಗರ ನಿರ್ಮಾಣಕ್ಕೆ ೬೦೦ ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡ ಯೋಜನೆಯನ್ನು ರೂಪಿಸಿದ್ದರು. ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡ ಅವರ ಜ್ಞಾಪಕಾರ್ಥವಾಗಿ ಅವರ ೧೦೮ ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ನ. ೧೧ ರಂದು ಕೆಂಪೇಗೌಡ ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಿ ಪ್ರವಾಸಿ ಕೇಂದ್ರವನ್ನಾಗಿ ಮಾಡುವ ಸರ್ಕಾರದ ಯೋಜನೆಯಂತೆ ರಥ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಅರಿವು ಮೂಡಿಸುವ ಉದ್ದೇಶ ಇದಾಗಿದೆ ಎಂದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ಕಾರ್ಯದರ್ಶಿ ಕೋಡಿರ ಪ್ರಸನ್ನ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕೆಂಪೇಗೌಡ ರಥಯಾತ್ರೆ ಮಡಿಕೇರಿ ತಾಲೂಕು ಉಸ್ತುವಾರಿ ಪಾಡಿಯಮ್ಮಂಡ ಮನು ಮಹೇಶ್, ಪಂಚಾಯಿತಿ ಹಾಗೂ ಇತರ ಚುನಾಯಿತ ಪ್ರತಿನಿಧಿಗಳು, ತಹಶೀಲ್ದಾರ್ ಮಹೇಶ್, ಆರ್.ಐ. ರವಿಕುಮಾರ್. ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.