ಮಡಿಕೇರಿ, ಅ. ೨೭: ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬAಧ ಪವಿತ್ರ ಮೃತ್ತಿಕೆ ಸಂಗ್ರಹಣಾ ಕಾರ್ಯಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರAಜನ್ ಅವರುಗಳ ಸಮ್ಮುಖದಲ್ಲಿ ನಗರದ ಜಿಲ್ಲಾಡಳಿತ ದ ಬಿ.ಸಿ.ನಾಗೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರAಜನ್ ಅವರುಗಳ ಸಮ್ಮುಖದಲ್ಲಿ ನಗರದ ಜಿಲ್ಲಾಡಳಿತ ನಿಟ್ಟಿನಲ್ಲಿ ರಾಜ್ಯಾದ್ಯಂತ ಪವಿತ್ರ ಮಣ್ಣು ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಭಾರತದ ಸ್ವಾತಂತ್ರö್ಯ ಪೂರ್ವ ಸಂದರ್ಭದಲ್ಲಿ ರಾಷ್ಟç ಅಭಿವೃದ್ಧಿಗೆ ರಾಜ ಮಹಾರಾಜರ ಕೊಡುಗೆ ಅಪಾರವಾಗಿದೆ. ಆ ಸಾಲಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಒಬ್ಬರು, ಕೆಂಪೇಗೌಡರ ಆದರ್ಶ ಆಡಳಿತ ಪ್ರತಿಯೊಬ್ಬರ ಮನೆಗೆ ತಲುಪಬೇಕು. ಆ ನಿಟ್ಟಿನಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ ಎಂದರು.

ಶಿಕ್ಷಣ, ಆರೋಗ್ಯ, ಕೈಗಾರಿಕೆ, ನೀರಾವರಿ, ಹೀಗೆ ಹಲವು ಕ್ಷೇತ್ರಗಳಿಗೆ ಮೈಸೂರು ಮಹಾರಾಜರು ಸೇರಿದಂತೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ಪ್ರಾಂತ್ಯದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ರಾಷ್ಟçದ ಪ್ರಥಮ ಗೃಹ ಸಚಿವರು ಹಾಗೂ ಉಕ್ಕಿನ

(ಮೊದಲ ಪುಟದಿಂದ) ಮನುಷ್ಯ ಎಂದೇ ಖ್ಯಾತರಾದ ಸರ್ಧಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆಯಂತೆ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸರ್ಕಾರದಿಂದ ನಿರ್ಮಿಸಲಾಗಿದ್ದು, ರಥ ಯಾತ್ರೆ ಮೂಲಕ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿಯೂ ಚಾಲನೆ ನೀಡಲಾಗಿದೆ ಎಂದರು.

ಸಾವಿರಾರು ರಾಜರು ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರು. ಆದರೂ ಪಠ್ಯಪುಸ್ತಕಗಳಲ್ಲಿ ಇವು ಇರಲಿಲ್ಲ. ೨೦೧೩ರಲ್ಲಿ ಪಠ್ಯ ಪರಿಷ್ಕರಣೆ ಮಾಡಲಾಯಿತು. ಆಗಲೂ ಕೂಡ ಟಿಪ್ಪು ಸುಲ್ತಾನನನ್ನು ವೈಭವೀಕರಿಸಲಾಗಿತ್ತೇ ಹೊರತು, ಕೆಂಪೇಗೌಡ ಹಾಗೂ ಮೈಸೂರು ರಾಜರ ಇತಿಹಾಸವನ್ನು ತೆಗೆಯಲಾಗಿತ್ತು ಎಂದು ಹೇಳಿದ ಸಚಿವರು, ಈ ಹಿನ್ನೆಲೆಯಲ್ಲಿ ಈ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅರೆಬಿಕ್ ಶಾಲೆಗಳ ಸರ್ವೆ

ರಾಜ್ಯದಲ್ಲಿ ೧೦೬ ಅನುದಾನಿತ ಅರೆಬಿಕ್ ಶಾಲೆಗಳಿವೆ. ೮೦ ಅನುದಾನರಹಿತ ಅರೆಬಿಕ್ ಶಾಲೆಗಳಿವೆ ಇವುಗಳು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲೇ ಬೋಧನೆ ಮಾಡಬೇಕಾಗಿತ್ತು. ಮಕ್ಕಳಿಗೆ ವೈಜ್ಞಾನಿಕ ಶಿಕ್ಷಣವನ್ನು ನೀಡಬೇಕಾಗಿತ್ತು. ಆದರೆ, ವಿಜ್ಞಾನ ಮತ್ತಿತರ ಪಠ್ಯ ಬೋಧನೆ ನಡೆಯುತ್ತಿಲ್ಲ. ಅಂಕಿ ಅಂಶಗಳ ಪ್ರಕಾರ ೨೭ ಸಾವಿರ ವಿದ್ಯಾರ್ಥಿಗಳು ಅರೆಬಿಕ್ ಶಾಲೆಗಳಲ್ಲಿ ದಾಖಲಾಗುತ್ತಿದ್ದಾರೆ. ಅಷ್ಟು ವಿದ್ಯಾರ್ಥಿಗಳಲ್ಲಿ ೨ ಸಾವಿರ ವಿದ್ಯಾರ್ಥಿಗಳು ಮಾತ್ರ ಹತ್ತನೇ ತರಗತಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಹೀಗಾಗಿ ಅರೆಬಿಕ್ ಶಾಲೆಗಳ ಸರ್ವೆಗೆ ಮುಂದಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜ್, ತಹಶೀಲ್ದಾರ್ ಮಹೇಶ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಅಧ್ಯಕ್ಷ ಭಾರತೀಶ್, ಮಾಜಿ ಎಂಎಲ್‌ಸಿ ಎಸ್.ಜಿ. ಮೇದಪ್ಪ, ಕೆ. ನಿಡುಗಣೆ ಗ್ರಾ.ಪಂ. ಅಧ್ಯಕ್ಷ ಡೀನ್ ಬೋಪಣ್ಣ, ನಗರಸಭೆ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಪ್ರಮುಖರು ಇದ್ದರು.

ಕೆಂಪೇಗೌಡರ ರಥಯಾತ್ರೆ ಸಂದರ್ಭದಲ್ಲಿ ಮಡಿಕೇರಿ ನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಪೂರ್ಣಕುಂಭದೊAದಿಗೆ ಸ್ವಾಗತಿಸಿದರು. ಚಾಲನೆ ಬಳಿಕ ನಗರದ ಜಿಲ್ಲಾಡಳಿತ ಭವನದಿಂದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಕಳುಹಿಸಿಕೊಡಲಾಯಿತು.