ಮಡಿಕೇರಿ, ಅ. ೨೭: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾAಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದಿಯAಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ತಾ. ೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಹೈ ಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ ಎಂದು ದಸಂಸ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕಡಗದಾಳು ಸರಕಾರಿ ಪ್ರೌಢ ಶಾಲೆಯ ಮುಖ್ಯ ಉಪಾಧ್ಯಾಯಿನಿ ಎಂ.ಜೆ. ಗಂಗಮ್ಮ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ನೇತ್ರದಾನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೃಪಾಲಿನಿ ಅಯ್ಯಪ್ಪ, ರಕ್ತನಿಧಿ ವಿಭಾಗದ ಮೆಡಿಕಲ್ ಆಫಿಸರ್ ಡಾ. ಕೆ.ಪಿ. ಕರುಂಬಯ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ಮಡಿಕೇರಿ ಲಯನ್ಸ್ ಕ್ಲಬ್ ಪ್ರಮುಖ ನವೀನ್ ಅಂಬೆಕಲ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ದಾನಿ ಹಾಗೂ ಸಮಾಜ ಸೇವಕ ಟಿ.ಆರ್. ವಾಸುದೇವ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮುಖ್ಯ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಜೆ.ಹಂಸ, ಡಿಎಸ್‌ಎಸ್ ತಾಲೂಕು ಸಂಚಾಲಕ ಎ.ಪಿ.ದೀಪಕ್, ನಗರ ಸಂಚಾಲಕ ಸಿ.ಪಿ. ಸಿದ್ದೇಶ್ವರ ಹಾಗೂ ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಸಂತೋಷ್ ಉಪಸ್ಥಿತರಿರುವರು.