ಡಾ. ಸುರೇಶ್ ಭಟ್
ಮಡಿಕೇರಿ, ಅ. ೨೮: ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿನ ಹಂದಿ ಸಾಕಾಣಿಕೆ ಕೇಂದ್ರದಲ್ಲಿರುವ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಪಿ. ಸುರೇಶ್ ಭಟ್ ತಿಳಿಸಿದರು.
ನಗರದ ಪಶುಪಾಲನಾ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹಂದಿ ಸಾಕಾಣಿಕ ಕೇಂದ್ರದ ೧ ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯವೆಂದು ಮತ್ತು ೧೦ ಕಿ.ಮೀ. ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಆಫ್ರಿಕನ್ ಹಂದಿ ಜ್ವರದಿಂದ ಮನುಷ್ಯನ ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸಗಳು ಉಂಟಾಗುವುದಿಲ್ಲ. ಹಂದಿಮಾAಸವನ್ನು ಸೇವಿಸುವವರು ಚೆನ್ನಾಗಿ ಬೇಯಿಸಿ ಹಂದಿ ಮಾಂಸ ಸೇವಿಸಬೇಕು. ಹೊರಗಿನ ಹಂದಿ ವ್ಯಾಪಾರಸ್ಥರು ಹಾಗೂ ಅನಧಿಕೃತ ವ್ಯಕ್ತಿಗಳು ಹಂದಿ ಮನೆಗಳಿಗೆ ಪ್ರವೇಶಿಸಿದಂತೆ ನಿಷೇಧಿಸುವುದು. ಹಂದಿ ಮನೆಗಳನ್ನು ಕ್ರಿಮಿನಾಶಕ ಹಾಗೂ ಬಿಸಿ ನೀರಿನಿಂದ ಪ್ರತಿನಿತ್ಯ ತೊಳೆಯಬೇಕು ಎಂದು ಹೇಳಿದರು.
ಹಂದಿಗಳ ಮೂಗು ಹಾಗೂ ಕಣ್ಣಿನಲ್ಲಿ ಕೀವು ಬರುವುದು ಕಂಡುಬAದರೆ ಅದು ಆಫ್ರಿಕನ್ ಹಂದಿ ಜ್ವರ ಲಕ್ಷಣವಾಗಿದೆ. ಈ ಸಂದರ್ಭದಲ್ಲಿ ಹಂದಿಗಳು ಒದ್ದಾಡಿ ದಿಢೀರ್ ಸಾಯುತ್ತವೆ. ಕಿವಿ, ಬಾಲ, ಹೊಟ್ಟೆಯ ಕೆಲಭಾಗದಲ್ಲಿ ಕೆಂಪಾಗುವುದು, ಉಸಿರಾಟದ ತೊಂದರೆ, ತೀವ್ರ ಜ್ವರ ಆಫ್ರಿಕನ್ ಹಂದಿ ಜ್ವರದ ಲಕ್ಷಣ ಎಂದು ಮಾಹಿತಿ ನೀಡಿದರು.
ರೋಗಪೀಡಿತ ಪ್ರದೇಶಗಳಿಂದ ಹಂದಿ ಮತ್ತು ಹಂದಿ ಉತ್ಪನ್ನಗಳ ಆಮದನ್ನು ನಿಲ್ಲಿಸುವುದು. ರೋಗಪೀಡಿತ ಪ್ರದೇಶಗಳಿಂದ ವಾಹನ ಸಂಚಾರ ನಿಯಂತ್ರಿಸುವುದು ಮತ್ತು ಸಾಧ್ಯವಾದರೆ ನಿಲ್ಲಿಸುವುದು ಸೂಕ್ತ ಎಂದರು.
ಆಫ್ರಿಕನ್ ಹಂದಿ ಜ್ವರವು ಹಂದಿ ಅಥವಾ ಹಂದಿಮಾAಸದ ಸೇವನೆಯ ಮೂಲಕ ಮನುಷ್ಯನಿಗೆ ಹರಡುವುದಿಲ್ಲ ಹಾಗೂ ಮಾನವರಲ್ಲಿ ಈ ವೈರಾಣು ಯಾವುದೇ ರೋಗವನ್ನುಂಟು ಮಾಡುವುದಿಲ್ಲ. ಆ ನಿಟ್ಟಿನಲ್ಲಿ ಹಂದಿಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ. ಹಂದಿಪಾಲಕರು ಮುಂಜಾಗ್ರತೆಯಾಗಿ ಜೈವಿಕ ಸುರಕ್ಷತೆಯ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದರು.
ರಾಸುಗಳಲ್ಲಿ ಚರ್ಮಗಂಟು ರೋಗ ಕಂಡುಬAದಲ್ಲಿ ಮುನ್ನೆಚ್ಚರ ವಹಿಸಲು ಸಲಹೆ
ರಾಸುಗಳಲ್ಲಿ ಚರ್ಮ ಗಂಟು ರೋಗದ ಲಕ್ಷಣಗಳು ಕಂಡುಬAದ ಕೂಡಲೇ ನುರಿತ ಪಶು ವೈದ್ಯರಿಂದ ಚಿಕಿತ್ಸೆ ಕೊಡಿಸಿದಲ್ಲಿ ರಾಸುಗಳು ಮರಣ ಹೊಂದುವುದನ್ನು ತಪ್ಪಿಸಬಹುದು ಎಂದು ಡಾ. ಸುರೇಶ್ ಭಟ್ ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಚರ್ಮಗಂಟು ರೋಗ ಇದುವರೆಗೆ ಪತ್ತೆ ಆಗಿಲ್ಲ. ಪಕ್ಕದ ಜಿಲ್ಲೆಗಳಾದ ಹಾಸನ, ಮೈಸೂರು ಜಿಲ್ಲೆಗಳಲ್ಲಿ ಚರ್ಮ ಗಂಟು ರೋಗ ಪತ್ತೆಯಾಗಿದೆ. ಈ ರೋಗವು ಅತಿ ವೇಗವಾಗಿ ಹರಡುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಅತಿಯಾದ ಜ್ವರ ಮತ್ತು ನಿಶ್ಯಕ್ತಿ, ಕಾಲು ಊತ ಮತ್ತು ಕುಂಟುವುದು, ಕಣ್ಣುಗಳಿಂದ ನೀರು ಸೋರುವುದು, ರಾಸುಗಳ ಚರ್ಮದ ಮೇಲೆ ಗುಳ್ಳೆ ಕಾಣಿಸಿಕೊಂಡು ನಂತರ ಹೊಡೆದು ಗಾಯವಾಗುವುದು, ಹಾಲಿನ ಇಳುವರಿ ಕಡಿಮೆಯಾಗುವುದು ಹಾಗೂ ಕೆಲವು ಸಂದರ್ಭಗಳಲ್ಲಿ ಗರ್ಭಪಾತವಾಗುವುದು ಚರ್ಮಗಂಟು ರೋಗದ ಲಕ್ಷಣ ಎಂದು ಅವರು ಮಾಹಿತಿ ನೀಡಿದರು.
ರೋಗಗ್ರಸ್ಥ ರಾಸುಗಳನ್ನು ಆರೋಗ್ಯವಂತ ದನಗಳಿಂದ ಬೇರ್ಪಡಿಸಿ ಕೂಡಲೇ ವೈದ್ಯರಿಂದ ಸೂಕ್ತ ಚಿಕಿತ್ಸೆಗೆ ಒಳಪಡಿಸಬೇಕು. ದನದ ಕೊಟ್ಟಿಗೆಯಲ್ಲಿ ಸೊಳ್ಳೆ, ನೊಣ, ಮತ್ತು ಉಣ್ಣೆಗಳನ್ನು ನಿಯಂತ್ರಿಸಬೇಕು, ಗಾಯಗಳ ಸೂಕ್ತ ಉಪಚಾರ ಹಾಗೂ ಖನಿಜ ಮಿಶ್ರಣ, ರೋಗ ನಿರೋಧಕ ಶಕ್ತಿ ವರ್ಧಕ ಔಷಧಿಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನು ತಪ್ಪಿಸಬಹುದು ಎಂದು ಅವರು ತಿಳಿಸಿದರು.
ರೋಗಗ್ರಸ್ಥ ರಾಸುಗಳು ಚೇತರಿಸಿಕೊಳ್ಳಲು ಕನಿಷ್ಟ ೨ ರಿಂದ ೩ ವಾರಗಳ ಚಿಕಿತ್ಸೆ ಅಗತ್ಯ. ರೋಗ ತೀವ್ರಗೊಂಡ ಸಂದರ್ಭದಲ್ಲಿ ಮೇಕೆ ಸಿಡಿಬು ಲಸಿಕೆಯನ್ನು ಬಳಸಿ, ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ. ಪಶು ವೈದ್ಯರ ಸಲಹೆ ಮೇರೆಗೆ ಸೂಕ್ತ ಸೋಂಕು ನಿವಾರಕಗಳಾದ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣವನ್ನು ನಿರ್ದಿಷ್ಟ ಪ್ರಮಾಣದಲ್ಲಿ ದನದ ಕೊಟ್ಟಿಗೆಗಳಲ್ಲಿ ಸಿಂಪಡಿಸಿ ಸ್ವಚ್ಛಗೊಳಿಸಬೇಕು ಎಂದು ಮಾಹಿತಿಯಿತ್ತರು.