ಮಡಿಕೇರಿ, ಅ. ೨೮: ಪ್ರಸಕ್ತ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ ಬಸವ ಬೆಳಗು, ವಿದೇಶ ವಿದ್ಯಾವಿಕಾಸ, ಜೀವಜಲ, ಕಾಯಕಕಿರಣ ಹಾಗೂ ಸ್ವ ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ೨೦೨೨-೨೩ನೇ ಸಾಲಿಗೆ ಅನುಮೋದಿಸಿದ ಕ್ರಿಯಾ ಯೋಜನೆಯಂತೆ ೫ ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯಿತ ಸಮುದಾಯದ ಅರ್ಹ ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಪ್ರವರ್ಗ-೧೧೧ ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಬಸವ ಬೆಳಗು: ವೃತ್ತಿಪರ ಕೋರ್ಸ್ಗಳಿಗೆ ವಾರ್ಷಿಕ ರೂ. ೧ ಲಕ್ಷಗಳ ಮಿತಿಯಲ್ಲಿ ಗರಿಷ್ಠ ರೂ. ೫ ಲಕ್ಷಗಳವರೆಗೆ ವಾರ್ಷಿಕ ಶೇ. ೨ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ. ವಿದೇಶ ವಿದ್ಯಾವಿಕಾಸ ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ೩.೫೦ ಲಕ್ಷಗಳಂತೆ, ೩ ವರ್ಷದ ಅವಧಿಗೆ ಒಟ್ಟು ರೂ. ೧೦ ಲಕ್ಷಗಳನ್ನು ಶೇ. ೨ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.

ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕನಿಷ್ಟ ೧ ಎಕರೆಯಿಂದ ೫ ಎಕರೆ ಜಮೀನು ಹೊಂದಿರಬೇಕು. ಘಟಕ ವೆಚ್ಚ ೨ ಲಕ್ಷ ಸಹಾಯಧನ ಹಾಗೂ ೫೦ ಸಾವಿರಗಳ ಸಾಲ ಶೇ.೪ ರ ಬಡ್ಡಿ ದರದಲ್ಲಿ ನೀಡಲಾಗುತ್ತದೆ.

ಕಾಯಕಕಿರಣ ಯೋಜನೆಯಡಿ ರೂ.೫೦ ಸಾವಿರ ಗಳವರೆಗಿನ ಘಟಕ ವೆಚ್ಚ ಆರ್ಥಿಕ ಚಟುವಟಿಕೆಗಳಿಗೆ ಶೇ.೩೦ ರಷ್ಟು ಗರಿಷ್ಠ ರೂ. ೧೦ ಸಾವಿರಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.೭೦ ರಷ್ಟು ಗರಿಷ್ಠ ೪೦ ಸಾವಿರಗಳನ್ನು ವಾರ್ಷಿಕ ಶೇ. ೨ ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.

ರೂ. ೫೦,೦೦೧ ರಿಂದ ರೂ. ೧ ಲಕ್ಷ ವರೆಗಿನ ಘಟಕ ವೆಚ್ಚದ ಆರ್ಥಿಕ ಚಟುವಟಿಕೆಗಳಿಗೆ ಶೇ.೨೦ ರಷ್ಟು ಗರಿಷ್ಠ ರೂ.೨೦ ಸಾವಿರಗಳ ಸಹಾಯಧನ ಹಾಗೂ ಉಳಿಕೆ ಶೇ. ೮೦ ರಷ್ಟು ಗರಿಷ್ಠ ರೂ. ೮೦ ಸಾವಿರಗಳನ್ನು ವಾರ್ಷಿಕ ಶೇ.೨ ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.

ಸ್ವಸಹಾಯ ಸಂಘಗಳಿಗೆ ಉತ್ತೇಜನ: ವೀರಶೈವ ಲಿಂಗಾಯಿತ ಸಮುದಾಯದ ಸ್ವಸಹಾಯ ಗುಂಪುಗಳ ೧೫ ಸದಸ್ಯರಿಗೆ ತಲಾ ರೂ. ೫ ಸಾವಿರಗಳ ಸಹಾಯಧನ ಹಾಗೂ ತಲಾ ರೂ. ೧೦ ಸಾವಿರಗಳ ಸಾಲವನ್ನು ವಾರ್ಷಿಕ ಶೇ. ೪ ರಷ್ಟು ಬಡ್ಡಿದರದಲ್ಲಿ ಹೀಗೆ ಪ್ರತಿ ಗುಂಪಿಗೆ ರೂ. ೭೫ ಸಾವಿರಗಳ ಸಹಾಯಧನ ಹಾಗೂ ರೂ. ೧.೫೦ ಸಾವಿರ ಗಳ ಸಾಲ ಒಟ್ಟು ರೂ. ೨.೨೫ ಸಾವಿರ ಮಂಜೂರು ಮಾಡಲಾಗುತ್ತದೆ.

ಅರ್ಹ ಫಲಾಪೇಕ್ಷಿಗಳು ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ೫ ಯೋಜನೆಗಳಿಗೆ ಸಂಬAಧಿಸಿದAತೆ ನಿಗಮದ ಅಧಿಕೃತ ವೆಬ್‌ಸೈಟ್ hಣಣಠಿs://ಞvಟಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿ ತಿರಸ್ಕರಿಸಲಾಗುವುದು. ಸರ್ಕಾರದ ವಿವೇಚನಾ ಕೋಟಾ ಮತ್ತು ಅಧ್ಯಕ್ಷರ, ನಿರ್ದೇಶಕರು ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸಹ ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವುದು.

ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯ ದೂ.ಸಂ. ೦೮೦-೨೨೮೬೫೫೨೨ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಡಿಕೇರಿ ದೂ. ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ

ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ ೩೧ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‌ಸೈಟ್ hಣಣಠಿs://bvತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೫ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.