ಚೆಟ್ಟಳ್ಳಿ, ಅ. ೨೯: ನಾಡಪ್ರಭು ಕೆಂಪೇಗೌಡರ ೧೦೮ ಅಡಿಯ ಭವ್ಯ ಕಂಚಿನ ಪ್ರತಿಮೆಯನ್ನು ನವೆಂಬರ್ ೧೧ ರಂದು ಬೆಂಗಳೂರಿನಲ್ಲಿ ಅನಾವರಣಗೊಳಿಸಲು ಎಲ್ಲಾ ಗ್ರಾಮಗಳ ಹಾಗೂ ದೇವಾಲಂiÀiಗಳ ಮಣ್ಣನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು ಎಲ್ಲರೂ ಕೈ ಜೋಡಿಸುವ ಮೂಲಕ ನಾಡಪ್ರಭುವಿಗೆ ಗೌರವ ಸಲ್ಲಿಸೋಣವೆಂದು ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದರು.
ಚೆಟ್ಟಳ್ಳಿಗೆ ಮಣ್ಣು ಸಂಗ್ರಹಕ್ಕೆ ಆಗಮಿಸಿದ ರಥಯಾತ್ರೆಯನ್ನು ಸ್ವಾಗತಿಸಿದ ಸಂದರ್ಭ ಮಾತನಾಡಿದ ಅವರು, ಯಾವುದೇ ತಂತ್ರಜ್ಞಾನಗಳಿಲ್ಲದ ಆಗಿನ ಕಾಲದಲ್ಲಿ ಸುಂದರವಾದ ಪರಿಸರ ಪ್ರೇಮಿ ಬೆಂಗಳೂರು ಆಗಬೇಕೆಂಬ ಉದ್ದೇಶದಿಂದ ನಾಡಪ್ರಭು ಕೆಂಪೇಗೌಡರು ನೂರಾರು ಕೆರೆಗಳ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ ಮಾಡಿ ಇಂದು ಬೆಂಗಳೂರು ಅನ್ನು ಇಡೀ ಕರ್ನಾಟಕ ಮಾತ್ರವಲ್ಲದೆ ಪ್ರಪಂಚವೇ ಮೆಚ್ಚುವಂತಾಗಿದೆ. ಇಂದು ಬದುಕು ಕಟ್ಟಿಕೊಳ್ಳಲು ಬೆಂಗಳೂರು ಪೂರಕವಾಗಿದೆ. ಇದಕ್ಕೆ ಮುಖ್ಯ ಕಾರಣಕರ್ತರಾದ ನಾಡಪ್ರಭು ಕೆಂಪೇಗೌಡ ಅವರನ್ನು ನಾವು ಮರೆಯಬಾರದು ಎಂದರು.
ರಥಯಾತ್ರೆ ಚೆಟ್ಟಳ್ಳಿಗೆ ಆಗಮಿಸುತ್ತಿದ್ದಂತೆ ಮಹಿಳೆೆಯರು ಪೂರ್ಣಕುಂಬದೊAದಿಗೆ ಸ್ವಾಗತಿಸಿದರು. ಪಂಚಾಯಿತಿ ಅಧ್ಯಕ್ಷ ಪಿ.ಟಿ. ಮುತ್ತಪ್ಪ, ಉಪಾಧ್ಯಕ್ಷೆ ಬಿ.ಆರ್. ವಿಮಲಾಕ್ಷಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅಪ್ಪಚಟ್ಟೋಳಂಡ ಮನುಮುತ್ತಪ್ಪ, ಬಲ್ಲಾರಂಡಮಣಿ ಉತ್ತಪ್ಪ, ಸೋಮವಾರಪೇಟೆ ಬಿಜೆಪಿ ಮಂಡಳ ಅಧ್ಯಕ್ಷ ಮನುಕುಮಾರ್ ರೈ, ಕಾರ್ಯದರ್ಶಿ ಗೌತಮ್, ಮಡಿಕೇರಿ ತಾಲೂಕಿನ ಅಧ್ಯಕ್ಷ ಕಾಂಗೀರÀ ಸತೀಶ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕಿನ ಇಓ ಜಯಣ್ಣ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೇಶವ, ಕುಶಾಲನಗರ ತಹಶೀಲ್ದಾರ್ ಪ್ರಕಾಶ್, ಪಿಡಿಓ ರಾಕೇಶ್, ಗ್ರಾಮ ಲೆಕ್ಕಿಗರಾದ ನಾಗೇಂದ್ರ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.