ಚೆಯ್ಯಂಡಾಣೆ, ಅ. ೨೯: ನಾಡಪ್ರಭು ಶ್ರೀ ಕೆಂಪೇಗೌಡರ ೧೦೮ ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆ ಅನಾವರಣ ಪ್ರಯುಕ್ತ ಕೊಡಗಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆ ಮಾಡಲಾಗುತ್ತಿದ್ದು, ಅದರ ಅಂಗವಾಗಿ ಮೃತ್ತಿಕೆ ಸಂಗ್ರಹಿಸುವ ವಾಹನ ಚೆಯ್ಯಂಡಾಣೆಗೆ ಆಗಮಿಸಿದ ಸಂದರ್ಭ ಸಂಜೀವಿನಿ ಒಕ್ಕೂಟದ ಮಹಿಳೆಯರು ಕಲಶ ಹೊತ್ತು ವಾಹನವನ್ನು ಬರಮಾಡಿಕೊಂಡರು. ಪುಷ್ಪಾರ್ಚನೆಯೊಂದಿಗೆ ಕೊಕೇರಿ ಮಹಿಳಾ ಮಂಡಳಿಯ ಸದಸ್ಯೆಯರು ಸ್ವಾಗತಿಸಿದರು.

ಸ್ಥಳೀಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮನೋಹರ್ ನಾಯ್ಕ್ ಕೆಂಪೇಗೌಡರ ಪ್ರತಿಮೆ ಅನಾವರಣದ ಬಗ್ಗೆ ಮಾತನಾಡಿದರು.

ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಕಾರ್ಯದರ್ಶಿ ಬಿದ್ದಪ್ಪ, ಗ್ರಾಮ ಪಂಚಾಯಿತಿ ಸದಸ್ಯರು ಮೃತ್ತಿಕೆಯನ್ನು ಹಸ್ತಾಂತರಿಸಿದರು.

ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ ತಮ್ಮಯ್ಯ, ಕೊಲೆಯಂಡ ಗಿರೀಶ್, ಶಕ್ತಿ ಕೇಂದ್ರದ ಅಧ್ಯಕ್ಷ ದನೋಜ್ ಪೊಕ್ಕುಳಂಡ್ರ, ಯುವ ಮೋರ್ಚಾ ಉಪಾಧ್ಯಕ್ಷ ಪವನ್ ತೋಟಂಬೈಲು, ಕಂದಾಯ ಪರಿವೀಕ್ಷಕ ರವಿ ಕುಮಾರ್, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯೆಯರು, ಕೊಕೇರಿ, ನರಿಯಂದಡ, ಚೇಲಾವರ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹಾಜರಿದ್ದರು. -ಅಶ್ರಫ್