(ತಾ. ೨೬ ರ ಸಂಚಿಕೆಯಿAದ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ
ಅಧಿಸೂಚನೆ - ೧: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ (೧೯೯೩ ರ ಕರ್ನಾಟಕ ಅಧಿನಿಯಮ ಸಂಖ್ಯೆ : ೧೪) ರ ಪ್ರಕರಣ ೧೭೭ರ ಉಪ ಪ್ರಕರಣ (೨)ರೊಂದಿಗೆ ಓದಿಕೊಂಡAತೆ ಪ್ರಕರಣ ೩೧೧ ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ) ನಿಯಮಗಳು, ೨೦೨೨ ರ ಕರಡನ್ನು ಸದರಿ ಅಧಿನಿಯಮದ ಪ್ರಕರಣ ೩೧೧ ರ ಉಪ ಪ್ರಕರಣ (೧)ರಲ್ಲಿ ನಿಗದಿಪಡಿಸಿದಂತೆ, ಇದರಿಂದ ಬಾಧಿತರಾಗುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ದಿನಾಂಕದಿAದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.
ಮೇಲೆ ನಿರ್ಧಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವ ಮೊದಲು ಸದರಿ ಕರಡು ನಿಯಮಗಳಿಗೆ ಸಂಬAಧಿಸಿದAತೆ ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರಕಾರವು ಪರಿಗಣಿಸುವುದು, ಆಕ್ಷೇಪಣೆ ಅಥವಾ ಸಲಹೆಗಳನ್ನು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, (ಪಂಚಾಯತ್ ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ೩ನೇ ಹಂತ, ೩ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-೦೧ ಇವರಿಗೆ ಕಳುಹಿಸಲು ಕೋರಲಾಗಿದೆ.
ಕರಡು ನಿಯಮಗಳು
೧. ಹೆಸರು ಮತ್ತು ಪ್ರಾರಂಭ: (೧) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ) ನಿಯಮಗಳು, ೨೦೨೨ ಎಂದು ಕರೆಯತಕ್ಕದ್ದು.
೨. ಇವು ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿAದ ಜಾರಿಗೆ ಬರುತ್ತದೆ.
೨. ಪರಿಭಾಷೆಗಳು: ಈ ನಿಯಮಗಳಲ್ಲಿ ವಿಷಯಕ್ಕೆ ಅಥವಾ ಸಂದರ್ಭಕ್ಕೆ ಬೇರೆ ಅರ್ಥದ ಅಗತ್ಯ ಇರದಿದ್ದರೆ,
(ಎ) ‘ಅಧಿನಿಯಮ’ ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ೧೯೯೩ (೧೯೯೩ ರ ಕರ್ನಾಟಕ ಅಧಿನಿಯಮ ಸಂಖ್ಯೆ ೧೪), ಮತ್ತು
೪. ಮೀಸಲಾತಿಯ ಆವರ್ತನೆ: (೧) ಅನುಸೂಚಿತ ಪಂಗಡಗಳಿಗೆ ಮೀಸಲಿಟ್ಟ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು (ರಾಜ್ಯದ ಒಟ್ಟು ಜನಸಂಖ್ಯೆಯ) ಪ್ರಮಾಣಕ್ಕನುಸಾರ ಯಾವ ಜಿಲ್ಲೆಯಲ್ಲಿ ಅನುಸೂಚಿತ ಪಂಗಡಗಳ ಜನಸಂಖ್ಯೆಯ ಶೇಕಡ ಪ್ರಮಾಣ ಅತ್ಯಂತ ಹೆಚ್ಚು ಇರುವುದೋ ಅಂತಹ ಜಿಲ್ಲಾ ಪಂಚಾಯಿತಿಗಳಿಗೆ ಹಂಚಿಕೆ ಮಾಡತಕ್ಕದ್ದು. ಅನುಸೂಚಿತ ಪಂಗಡಗಳಿಗೆ ಸೇರಿದ ಸದಸ್ಯರಿಗಾಗಿ ಅಷ್ಟೇ ಸಂಖ್ಯೆಯ ಉಪಾಧ್ಯಕ್ಷ ಹುದ್ದೆಗಳನ್ನು ಜಿಲ್ಲಾ ಪಂಚಾಯಿತಿಗಳಿಗೆ ಹಂಚಿಕೆ ಮಾಡುವಾಗ ಅದೇ ವಿಧಾನಗಳನ್ನು ಅನುಸರಿಸತಕ್ಕದ್ದು. ಆದರೆ, ಈ ನಿಯಮಗಳು ಪ್ರಾರಂಭವಾದ ದಿನಾಂಕದಿAದ ಮೀಸಲಾತಿಯ ಆವರ್ತನೆಯು ಪ್ರಾರಂಭವಾಗುತ್ತದೆ. ಇನ್ನು ಮುಂದಿನ ಅವಧಿಗೆ ಮೀಸಲಾತಿಯನ್ನು ಆವರ್ತನೆಗೊಳಿಸುವಾಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿಯು ಹಂಚಿಕೆಯಾಗಿರುವAತಹ ಜಿಲ್ಲಾ ಪಂಚಾಯಿತಿಗಳನ್ನು ಹೊರತುಪಡಿಸತಕ್ಕದ್ದು.
(ಮುಂದುವರಿಯುವುದು)