ಮಡಿಕೇರಿ, ಅ. ೨೮: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯವನ್ನು ಪಡೆಯಲು ವೀರಾಜಪೇಟೆ ಕ್ಷೇತ್ರದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕನಿಷ್ಟ ೧ ಎಕರೆಯಿಂದ ೫ ಎಕರೆಯವರೆಗಿನ ಖುಷ್ಕಿ ಜಮೀನಿನಲ್ಲಿ ಕೊಳವೆ ಬಾವಿ ನಿರ್ಮಿಸಿ, ಪಂಪು ಮೋಟಾರ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯವನ್ನು ಒದಗಿಸುವುದು ಈ ಯೋಜನೆ ಅನುಷ್ಟಾನದ ಉದ್ದೇಶವಾಗಿದೆ.
ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಕಚೇರಿಯಿಂದ ಉಚಿತವಾಗಿ ಅರ್ಜಿ ಪಡೆದು ಒಂದು ವಾರದ ಒಳಗೆ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಗುರುತಿನ ಚೀಟಿ, ಆಧಾರ್ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಆರ್ಟಿಸಿ, ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ/ ಭೂ ಹಿಡುವಳಿದಾರರ ಪ್ರಮಾಣ ಪತ್ರ, ನಕ್ಷೆ, ಚೆಕ್ಕುಬಂದಿ, ಮ್ಯುಟೇಷನ್ ಈ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಿಯಮಿತ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ.೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ್ ತಿಳಿಸಿದ್ದಾರೆ.