ಮಡಿಕೇರಿ, ಅ.೨೮: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆÀಮಿ ಇವರ ಸಹಯೋಗದಲ್ಲಿ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯ ಪ್ರಯುಕ್ತ ತಾ.೩೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ಶಾಸಕ ಮಂಡೇಪAಡ ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವೀರಾಜಪೇಟೆ ಶಾಸಕ ಕೊಂಬಾರನ ಜಿ. ಬೋಪಯ್ಯ, ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಓ ಡಾ. ಎಸ್. ಆಕಾಶ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಡಳಿತಾಧಿಕಾರಿ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.