ಮಡಿಕೇರಿ, ಅ. ೨೯: ಗೋಣಿಕೊಪ್ಪಲಿನ ಕಾವೇರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಜೂನಿಯರ್ ಅಂಡರ್ ಆಫೀಸರ್ ಅನನ್ಯ ಎಂ.ಆರ್. ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ಘಟಕದಿಂದ ಆಯ್ಕೆಯಾಗಿ ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೈನಿಕ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಈಅಃಅ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ೭ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾಳೆ.

ಕಾವೇರಿ ಕಾಲೇಜಿನ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಲೇಪಾಕ್ಷಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿರುವ ಈಕೆ ತಿತಿಮತಿ ಗ್ರಾಮದ ರಾಕೇಶ್ ಎಂ.ಆರ್. ಮತ್ತು ಹರಿಣಿ ದಂಪತಿಯ ಪುತ್ರಿ.