೪. ಮೀಸಲಾತಿಯ ಆವರ್ತನೆ: (೧) ಅನುಸೂಚಿತ ಪಂಗಡಗಳಿಗೆ ಮೀಸಲಿಟ್ಟ ತಾಲೂಕು ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು (ರಾಜ್ಯದ ಒಟ್ಟು ಜನಸಂಖ್ಯೆಯ) ಪ್ರಮಾಣಕ್ಕನುಸಾರ ಯಾವ ತಾಲೂಕಿನಲ್ಲಿ ಅನುಸೂಚಿತ ಪಂಗಡಗಳ ಜನಸಂಖ್ಯೆಯ ಶೇಕಡ ಪ್ರಮಾಣ ಅತ್ಯಂತ ಹೆಚ್ಚು ಇರುವುದೋ ಅಂತಹ ತಾಲೂಕು ಪಂಚಾಯಿತಿಗಳಿಗೆ ಹಂಚಿಕೆ ಮಾಡತಕ್ಕದ್ದು. ಅನುಸೂಚಿತ ಪಂಗಡಗಳಿಗೆ ಸೇರಿದ ಸದಸ್ಯರಿಗಾಗಿ ಅಷ್ಟೇ ಸಂಖ್ಯೆಯ ಉಪಾಧ್ಯಕ್ಷ ಹುದ್ದೆಗಳನ್ನು ತಾಲೂಕು ಪಂಚಾಯಿತಿಗಳಿಗೆ ಹಂಚಿಕೆ ಮಾಡುವಾಗ ಅದೇ ವಿಧಾನವನ್ನು ಅನುಸರಿಸತ್ತದ್ದು. ಆದರೆ, ಈ ನಿಯಮಗಳು ಪ್ರಾರಂಭವಾದ ದಿನಾಂಕದಿAದ ಮೀಸಲಾತಿಯ ಆವರ್ತನೆಯು ಪ್ರಾರಂಭವಾಗುತ್ತದೆ. ಆವರ್ತನೆಗೊಳಿಸುವಾಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿಯು ಹಂಚಿಕೆಯಾಗಿರುವAತ ತಾಲೂಕು ಪಂಚಾಯಿತಿಗಳನ್ನು ಹೊರತುಪಡಿಸತಕ್ಕದ್ದು.
(೨) ರಾಜ್ಯದಲ್ಲಿನ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಉಪ ನಿಯಮ (೧) ರಲ್ಲಿ ನಿರ್ದಿಷ್ಟಪಡಿಸಿರುವ ರೀತಿಯಲ್ಲಿಯೇ ಅನುಸೂಚಿತ ಜಾತಿಗಳಿಗೆ ಸೇರಿದ ಸದಸ್ಯರಿಗಾಗಿ ಹಂಚಿಕೆ ಮಾಡತಕ್ಕದ್ದು.
ಪರಂತು, ಯಾವುದೇ ಜಿಲ್ಲಾ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳೆರಡನ್ನೂ ಕೇವಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಪ್ರವರ್ಗಕ್ಕೆ ಹಂಚಿಕೆ ಮಾಡತಕ್ಕದ್ದಲ್ಲ.
ಮತ್ತು ಪರಂತು, ಯಾವುದೇ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಅಥವಾ ಉಪಾಧ್ಯಕ್ಷರ ಹುದ್ದೆಯನ್ನು ನಿಕಟಪೂರ್ವ ಅವಧಿಯಲ್ಲಿ ಅನುಸೂಚಿತ ಜಾತಿಗೆ ಮೀಸಲಿರಿಸಿದ್ದಲ್ಲಿ, ಸದರಿ ಹುದ್ದೆಯನ್ನು ಮುಂದಿನ ಅವಧಿಯಲ್ಲಿ ಅನುಸೂಚಿತ ಪಂಗಡಗಳಿಗೆ ಮೀಸಲಿರಿಸತಕ್ಕದ್ದಲ್ಲ. ಅದೇ ರೀತಿ ಅನುಸೂಚಿತ ಪಂಗಡಗಳಿಗೆ ಮೀಸಲಿರಿಸಿದ್ದಲ್ಲಿ, ಅನುಸೂಚಿತ ಜಾತಿಗಳಿಗೆ ಮೀಸಲಿರಿಸತಕ್ಕದ್ದಲ್ಲ.
(೩) ಹಿಂದುಳಿದ ವರ್ಗಳಿಗಾಗಿ ಮೀಸಲಿಟ್ಟಿರುವ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳನ್ನು ಮತ್ತು ಮೀಸಲಿಡದ ಪ್ರವರ್ಗದವರಿಗಾಗಿ ನಿಗದಿ ಮಾಡಿರುವ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳನ್ನು ಯುಕ್ತತೆಗೆ ಅನುಗುಣವಾದ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಹಂಚಿಕೆ ಮಾಡತಕ್ಕದ್ದು.
(೪) ನಿಯಮ ೩ ರಲ್ಲಿ ಉಲ್ಲೇಖಿಸಲಾದ ಪ್ರತಿಯೊಂದು ಪ್ರವರ್ಗದಲ್ಲಿ ಮಹಿಳೆಯರಿಗೆ ಮೀಸಲಿರಿಸಿದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಯುಕ್ತತೆಗೆ ಅನುಗುಣವಾದ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಹಂಚಿಕೆ ಮಾಡತಕ್ಕದ್ದು.
ಪರಂತು, ಯಾವುದೇ ಜಿಲ್ಲಾ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳೆರಡನ್ನೂ (ಸಾಧ್ಯವಿದ್ದಷ್ಟು ಮಟ್ಟಿಗೆ) ಮಹಿಳೆಯರಿಗೆ ಮೀಸಲಿರಿಸತಕ್ಕದ್ದಲ್ಲ.
(೫) ೩ನೇ ನಿಯಮಕ್ಕೆ ಒಳಪಟ್ಟು ರಾಜ್ಯದ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳನ್ನು ಅವಧಿಯಿಂದ ಅವಧಿಗೆ ಸರದಿ ಪ್ರಕಾರ ತುಂಬತಕ್ಕದ್ದು.
ಪರAತು, ಒಂದು ನಿರ್ದಿಷ್ಟ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳನ್ನು ಮುಂದಿನ ಅವಧಿಯಲ್ಲಿ ಅದೇ ವರ್ಗಕ್ಕೆ ಹಂಚಿಕೆ ಮಾಡತಕ್ಕದ್ದಲ್ಲ. ಆದರೆ ಕಾಯ್ದಿಯಿಸದೇ ಇರುವ ಪ್ರವರ್ಗದ ಹುದ್ದೆಯನ್ನು ಮತ್ತೆ ಮುಂದುವರಿಸಲು ಯಾವುದೇ ನಿರ್ಬಂಧವಿರುವುದಿಲ್ಲ.
ಮತ್ತು ಪರಂತು, ಮಹಿಳೆಯರಿಗೆ ಮೀಸಲಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳನ್ನು ಮುಂದಿನ ಅವಧಿಯಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಮಹಿಳೆಯರಿಗೆ ಹಂಚಿಕೆ ಮಾಡತಕ್ಕದ್ದಲ್ಲ.
(೬) ಮೇಲಿನ ಉಪ ನಿಯಮಗಳ ಅನುಸಾರ ಜಿಲ್ಲಾ ಪಂಚಾಯಿತಿ ಸದಸ್ಯರ ಮೀಸಲಾತಿಯನ್ನು ಪ್ರಕಟಿಸುವ ಸಂದರ್ಭದಲ್ಲಿಯೇ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸತಕ್ಕದ್ದು ಹಾಗೂ ವಿವಿಧ ವರ್ಗಗಳಿಗೆ ನಿಗದಿಗೊಳಿಸುವ ಮೀಸಲಾತಿಯ ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸುವುದು ಹಾಗೂ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಕಾಲಾವಕಾಶ ನೀಡತಕ್ಕದ್ದು. ಸ್ವೀಕೃತವಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿದ ನಂತರ, ಅಂತಿಮ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು.
೫. ನಿರಸನ: ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ) ನಿಯಮಗಳು, ೨೦೦೫ನ್ನು ಈ ಮೂಲಕ ನಿರಸನಗೊಳಿಸಲಾಗಿದೆ.
ಗ್ರಾಮೀಣಾಭಿವವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ
ಅಧಿಸೂಚನೆ ೧೧ - ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ (೧೯೯೩ ರ ಕರ್ನಾಟಕ ಅಧಿನಿಯಮ ಸಂಖ್ಯೆ ೧೪) ರ ಪ್ರಕರಣ ೧೩೮ ರೊಂದಿಗೆ ಓದಿಕೊಂಡAತೆ ಪ್ರಕರಣ ೩೧೧ ರ ಮೂಲಕ ಪ್ರದತ್ತವಾದ ಅಧಿಕಾರಿಗಳನ್ನು ಚಲಾಯಿಸಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಾಲೂಕು ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ) ನಿಯಮಗಳು ೨೦೨೨ ರ ಕರಡನ್ನು ಸದರಿ ಅಧಿನಿಯಮದ ಪ್ರಕರಣ ೩೧೧ ರ ಉಪ ಪ್ರಕರಣ (೧) ರಲ್ಲಿ ನಿಗದಿಪಡಿಸಿದಂತೆ, ಇದರಿಂದ ಬಾಧಿತರಾಗುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ದಿನಾಂಕದಿAದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.
ಮೇಲೆ ನಿರ್ಧಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವ ಮೊದಲು ಸದರಿ ಕರಡು ನಿಯಮಗಳಿಗೆ ಸಂಬAಧಿಸಿದAತೆ ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರಕಾರವು ಪರಿಗಣಿಸುವುದು. ಆಕ್ಷೇಪಣೆ ಅಥವಾ ಸಲಹೆಗಳನ್ನು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, (ಪಂಚಾಯತ್ ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ೩ನೇ ಹಂತ, ೩ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-೦೧ ಇವರಿಗೆ ಕಳುಹಿಸಲು ಕೋರಲಾಗಿದೆ.
(ಮುಂದುವರಿಯುವುದು)