ಶನಿವಾರಸಂತೆ, ಅ. ೨೯: ಕೊಡ್ಲಿಪೇಟೆ ಹೋಬಳಿ ಕೂಡ್ಲೂರು ಗ್ರಾಮ ನಿವಾಸಿ ಬೆಸೂರು ಗ್ರಾಮ ಪಂಚಾಯಿತಿ ಸದಸ್ಯ ಬಿ.ಎನ್. ರವಿ ಅವರ ಮೇಲೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಾ.೨೮ರ ಸಂಜೆ ರವಿ ತಮ್ಮ ಕಾರಿನಲ್ಲಿ ತನ್ನ ತೋಟಕ್ಕೆ ಹೋಗುತ್ತಿದ್ದಾಗ ಪ್ರಸನ್ನ ಎಂಬಾತ ಕಾರನ್ನು ತಡೆದು, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ್ದಾನೆ. ರವಿ ಶನಿವಾರಸಂತೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ವೈದ್ಯರ ಸಲಹೆಯಂತೆ ಅರಕಲಗೋಡು ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದು, ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆ ಕಲಂ ೩೪೧, ೫೦೪, ೩೨೪, ೫೦೬ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.